ಭೀಕರ ಅಪಘಾತದಲ್ಲಿ ನಾಲ್ವರ ದುರ್ಮರಣ

Devadurga accident 4 peoples death
ದೇವದುರ್ಗ ತಾಲೂಕು ಅಮರಾಪುರದಲ್ಲಿ ಸೇತುವೆ ತಡೆಗೋಡೆಗೆ ಬೊಲೆರೋ ವಾಹನ ಡಿಕ್ಕಿಯಾಗಿರುವುದು.
Published on

ದೇವದುರ್ಗ: ತಾಲೂಕಿನ ಗಬ್ಬೂರು ಸಮೀಪದ ಅಮರಾಪುರ ಗ್ರಾಮದಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಬೊಲೆರೋ ಪಿಕಪ್ ವಾಹನ ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದಿದ್ದರಿಂದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆಂಧ್ರಪ್ರದೇಶದ ಹಿಂದುಪುರ ನಿವಾಸಿಗಳಾದ ನಾಗರಾಜ (28), ಸೋಮು(38), ನಾಗಭೂಷಣ (36), ಮುರಳಿ(38) ಮೃತಪಟ್ಟಿದ್ದಾರೆ. ವಾಹನ ಚಾಲಕ ಆನಂದ ತೀವ್ರವಾಗಿ ಗಾಯಗೊಂಡಿದ್ದು, ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಧ್ರದ ಐವರು ಯಾದಗಿರಿ ಜಿಲ್ಲೆ ಶಹಾಪುರದ ಸಂತೆಗೆ ಕುರಿ ಖರೀದಿಗೆ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಎಸ್ಪಿ ಪುಟ್ಟಮಾದಯ್ಯ, ಗಬ್ಬೂರು ಠಾಣೆ ಪಿಎಸ್‌ಐ ಗಂಗಪ್ಪ ಬುರ್ಲಿ, ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಗಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net