ನೌಕರರ ಭವನ ನಿರ್ಮಾಣಕ್ಕೆ ಅನುದಾನ ಒದಗಿಸಿ

Devadurga Minister Ramesh Jarkiholi govt employes Appeal,
ಯಾದಗಿರಿಯಲ್ಲಿ ಸಚಿವ ರಮೇಶ ಜಾರಕಿಹೊಳಿಗೆ ಸರ್ಕಾರಿ ನೌಕರರ ಸಂಘ ಮನವಿ ಸಲ್ಲಿಸಿ ಸನ್ಮಾನಿಸಿತು. ತಾಲೂಕು ಅಧ್ಯಕ್ಷ ಹನುಮಂತ್ರಾಯ ಶಾಖೆ, ರಾಜ್ಯ ಪರಿಷತ್ ಸದಸ್ಯ ಶರಣಬಸವ, ತಾಲೂಕು ಕಾರ್ಯದರ್ಶಿ ಮಹಾದೇವ ಪಾಟೀಲ್, ಜಂಟಿ ಕಾರ್ಯದರ್ಶಿ ಅಭಿಷೇಕ ಹುಡೇದ್, ಕೆಪಿಸಿಸಿ ಪಪಂದ ಕಾರ್ಯದರ್ಶಿ ವೇಣುಗೋಪಾಲಗೌಡ ವಕೀಲ, ಕಾಂಗ್ರೆಸ್ ಮುಖಂಡ ರವಿ ಪಾಟೀಲ್ ಇದ್ದರು.
Published on

ದೇವದುರ್ಗ: ಪಟ್ಟಣದ ಸರ್ಕಾರಿ ನೌಕರರ ಸಂಘಕ್ಕೆ ಸಮುದಾಯ ಭವನ, ಕಚೇರಿ ನಿರ್ಮಾಣಕ್ಕೆ ಅನುದಾನ ನೀಡುವಂತೆ ಒತ್ತಾಯಿಸಿ ಯಾದಗಿರಿಯಲ್ಲಿ ಸಚಿವ ರಮೇಶ ಜಾರಕಿಹೊಳಿಗೆ ಕರ್ನಾಟಕ ಸರ್ಕಾರಿ ನೌಕರರ ಸಂಘ ಸೋಮವಾರ ಮನವಿ ಸಲ್ಲಿಸಿತು.

ದೇವದುರ್ಗ ತಾಲೂಕಿನಲ್ಲಿ ಎಲ್ಲಿಯೂ ಸರ್ಕಾರಿ ನೌಕರರ ಭವನವಿಲ್ಲ. ಇದರಿಂದ ಯಾವುದೇ ಕಾರ್ಯಕ್ರಮ ಮಾಡಲು ಖಾಸಗಿ ಸಮುದಾಯ ಭವನದ ಮೊರೆ ಹೋಗುವ ಸ್ಥಿತಿಯಿದೆ. ಇದರಿಂದ ಹೊರೆಯಾಗುವ ಜತೆಗೆ ಸ್ವಂತ ಕಚೇರಿ ಮಾಡಿಕೊಳ್ಳಲು ಸಮಸ್ಯೆಯಾಗುತ್ತಿದೆ. ಭವನಕ್ಕೆ ಅನುದಾನ ನೀಡುವಂತೆ ಮನವಿ ಮಾಡಿದರೂ ಸ್ಪಂದನೆ ದೊರೆತಿಲ್ಲ. ನೌಕರರ ಭವನ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ಅನುದಾನ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net