ಯೋಜನೆಗಳಿಂದ ಬಡವರಿಗೆ ಸಹಾಯ

Devadurga shakti yojane jagruti
ದೇವದುರ್ಗದ ಬಸ್ ನಿಲ್ದಾಣದಲ್ಲಿ ಸೋಮವಾರ ಆಯೋಜಿಸಿದ್ದ ಶಕ್ತಿ ಯೋಜನೆ ಜಾಗೃತಿ ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆ ಸಮಿತಿ ತಾಲೂಕು ಅಧ್ಯಕ್ಷ ಲಕ್ಷ್ಮಣ ಜ್ಯೋತಿ, ತಾಪಂ ಇಒ ಬಸವರಾಜ ಹಟ್ಟಿ, ಸಾರಿಗೆ ಸಂಸ್ಥೆ ಡಿಪೋ ಮ್ಯಾನೇಜರ್ ರಾಮನಗೌಡ, ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಅಜೀಜ್, ಭೀಮಣ್ಣ, ಶಿವನಗೌಡ ಗಾಣದಾಳ, ರಾಮಣ್ಣ ಇತರರಿದ್ದರು.
Published on

ದೇವದುರ್ಗ: ಬಡ ಜನರ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆ ಗಳನ್ನು ಜಾರಿಗೊಳಿಸಿದ್ದು, ಅನುಕೂಲವಾಗಿದೆ ಎಂದು ಗ್ಯಾರಂಟಿ ಯೋಜನೆ ಸಮಿತಿ ತಾಲೂಕು ಅಧ್ಯಕ್ಷ ಲಕ್ಷ್ಮಣ ಜ್ಯೋತಿ ಹೇಳಿದರು.

ರಾಜ್ಯ ಸರ್ಕಾರದ ಶಕ್ತಿ ಯೋಜನೆಗೆ ಎರಡು ವರ್ಷ ಪೂರೈಸಿದ ನಿಮಿತ್ತ ಪಟ್ಟಣದ ಬಸ್ ನಿಲ್ದಾಣದಲ್ಲಿ ಆಯೋಜಿಸಿದ್ದ ಗ್ಯಾರಂಟಿ ಜಾಗೃತಿ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದರು. ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ತುಂಬ ಅನುಕೂಲವಾಗಿದ್ದು, ರಾಜ್ಯದಲ್ಲಿ 500 ಕೋಟಿ ಬಸ್ ಟಿಕೆಟ್ ಉಚಿತವಾಗಿ ನೀಡಲಾಗಿದೆ. ಜಿಲ್ಲೆಯಲ್ಲಿ 889 ಲಕ್ಷ ಟಿಕೆಟ್ ನೀಡಲಾಗಿದೆ. ನಿತ್ಯ 1.16ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಸರ್ಕಾರದಿಂದ ಸಾರಿಗೆ ಸಂಸ್ಥೆಗೆ ಸುಮಾರು 1923ಕೋಟಿ ರೂ. ಆದಾಯ ಬಂದಿದೆ. ಜನರು ಸರ್ಕಾರದ ಐದು ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಜೀವನ ಕಟ್ಟಿಕೊಳ್ಳಬೇಕು ಎಂದು ಸಲಹೆ ನೀಡಿದರು.

ತಾಪಂ ಇಒ ಬಸವರಾಜ ಹಟ್ಟಿ, ಡಿಪೋ ಮ್ಯಾನೇಜರ್ ರಾಮನಗೌಡ, ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಅಜೀಜ್, ಭೀಮಣ್ಣ, ಶಿವನಗೌಡ ಗಾಣದಾಳ, ರಾಮಣ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net