

ದೇವದುರ್ಗ: ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿ ಖಂಡಿಸಿ ತಾಲೂಕಿನ ಜಾಲಹಳ್ಳಿಯಲ್ಲಿ ಸಿಪಿಐಎಂ ಮುಖಂಡರು ಶುಕ್ರವಾರ ಸಂಜೆ ಪಂಜಿನ ಮೆರವಣಿಗೆ ನಡೆಸಿದರು.
ಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಸ್ಥಾನದಿಂದ ವಿವಿಧ ಬಡಾವಣೆ ಮೂಲಕ ಡಾ.ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ನಡೆಯಿತು. ನಂತರ ಮೃತರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ಮಾಡಲಾಯಿತು. ಜಿಲ್ಲಾ ಕಾರ್ಯದರ್ಶಿ ಗಿರಿಯಪ್ಪ ಪೂಜಾರಿ ಮಾತನಾಡಿ, ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರ ದಾಳಿ ಖಂಡನೀಯ. ಇಲ್ಲಿ ಕೇಂದ್ರ ಸರ್ಕಾರದ ಭದ್ರತೆ ಹಾಗೂ ಗುಪ್ತಚರ ವೈಫಲ್ಯ ಎದ್ದುಕಾಣುತ್ತಿದೆ. ಘಟನೆಯ ಹೊಣೆ ಹೊತ್ತು ಕೇಂದ್ರ ಗೃಹ ಸಚಿವ ಅಮಿತ್ ಷಾ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಾಜೀನಾಮೆ ನೀಡಬೇಕು. ಉಗ್ರರಿಗೆ ತಕ್ಕಪಾಠ ಕಲಿಸಬೇಕು ಎಂದು ಆಗ್ರಹಿಸಿದರು.
ತಾಲೂಕು ಕಾರ್ಯದರ್ಶಿ ನರಸಣ್ಣ ನಾಯಕ, ಮುಖಂಡರಾದ ಮಹಾಲಿಂಗ ದೊಡ್ಡಮನಿ, ಹನುಮಂತ ಗುರಿಕಾರ, ದುರುಗಪ್ಪ ನಾಯಕ, ರಂಗನಾಥ ನಾಯಕ, ಬಸವರಾಜ ನಾಯಕ, ಶಬ್ಬೀರ್ ಜಾಲಹಳ್ಳಿ, ಸದ್ದಾಂ ಇತರರಿದ್ದರು.