

ದೇವದುರ್ಗ: ಶಾಸಕಿ ಕರೆಮ್ಮ ನಾಯಕ ನಡೆಸುವ ಕಾನೂನು ಬಾಹಿರ ಚಟುವಟಿಕೆಗಳ ಬಗ್ಗೆ ಮಾತನಾಡುವವರಿಗೆ ಶಾಸಕಿ ಬೆಂಬಗಲಿರು ಜೀವ ಬೆದರಿಕೆ ಹಾಕುತ್ತಿದ್ದು, ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಾಯಚೂರಿನಲ್ಲಿ ಎಸ್ಪಿ ಪುಟ್ಟಮಾದಯ್ಯಗೆ ಭೀಮ್ ಆರ್ಮಿ (ಭಾರತ್ ಏಕ್ತಾ ಮಿಷನ್) ಸಂಘಟನೆಯಿಂದ ಶನಿವಾರ ಮನವಿ ಸಲ್ಲಿಸಲಾಯಿತು.
ಇದನ್ನೂ ಓದಿ:ಮಂಗಳೂರು ಹಿಂದೂ ಸಂಘಟನೆ ಮುಖಂಡರಿಗೆ ಜೀವ ಬೆದರಿಕೆ
ಪಟ್ಟಣದ ಪ್ರವಾಸಿ ಮಂದಿರಕ್ಕೆ ಶಾಸಕರ ಕಾರ್ಯಾಲಯ ಎಂದು ನಾಮಫಲಕ ಹಾಕಿದ್ದಾರೆ. ಈ ಕುರಿತು ಸಂಬಂಧಿಸಿದವರೆಗೆ ದೂರು ಸಲ್ಲಿಸಿ ಸಾಮಾಜಿಕ ಜಾಲತಾಣದಲ್ಲಿ ಅನ್ಯಾಯದ ಬಗ್ಗೆ ಸಂಘದ ತಾಲೂಕು ಅಧ್ಯಕ್ಷ ವಿಶ್ವನಾಥ ಬಲ್ಲಿದವ್ ಪೋಸ್ಟ್ ಹಾಕಿದ್ದರು. ಅಲ್ಲದೆ ಶಾಸಕಿ ಕರೆಮ್ಮ ಜಿ.ನಾಯಕ ಪಾದಯಾತ್ರೆ ನಡೆಸಿದ ವೇಳೆ ಶಾಸಕಿ ಪುತ್ರಿ ಗೌರಿ ಜಿ.ನಾಯಕ ಅವರ ಕಾರು ಅಮಾಯಕ ವ್ಯಕ್ತಿಗೆ ಡಿಕ್ಕಿ ಹೊಡೆದಿತ್ತು. ಈ ಬಗ್ಗೆ ಧ್ವನಿ ಎತ್ತಿ ಸಂತ್ರಸ್ತರಿಗೆ ನ್ಯಾಯ ಒದಗಿಸಲಾಗಿತ್ತು. ಇದನ್ನೇ ನೆಪವಾಗಿಟ್ಟುಕೊಂಡು ವಿಶ್ವನಾಥ ಬಲ್ಲಿದವ್ ಅವರಿಗೆ ಶಾಸಕಿ ಬೆಂಬಲಿಗರು ಕರೆ ಮಾಡಿ ಜೀವ ಬೆದರಿಕೆ ಹಾಕುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಶಾಸಕಿ ಪುತ್ರಿ ಗೌರಿ ಜಿ.ನಾಯಕ ಅವರ ನಕಲಿ ಫೇಸ್‌ಬುಕ್ ಖಾತೆ ಮೂಲಕ ವಿಶ್ವನಾಥ ಬಲ್ಲಿದವ್‌ಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದರು.
ದಾಖಲೆ ಸಮೇತ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದರೂ ಕೇಸ್ ದಾಖಲು ಮಾಡಿಕೊಳ್ಳುತ್ತಿಲ್ಲ. ಪರಿಶೀಲನೆ ನಡೆಸಿ ಜೀವ ಬೆದರಿಕೆ ಹಾಕಿದ ಶಾಸಕಿ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸಬೇಕು. ಬೆದರಿಕೆ ಹಾಕುವ ನಕಲಿ ಫೇಸ್‌ಬುಕ್ ಖಾತೆಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಪ್ರವೀಣ್‌ಕುಮಾರ್, ತಾಲೂಕು ಅಧ್ಯಕ್ಷ ವಿಶ್ವನಾಥ ಬಲ್ಲಿದವ್, ಪ್ರಧಾನ ಕಾರ್ಯದರ್ಶಿ ಮೋಹನ್ ಬಲ್ಲಿದವ್, ಬಾಬಾ ಖಾನ್ ಇತರರಿದ್ದರು.