ಕೇಂದ್ರ ಸ್ಥಾನದಲ್ಲಿದ್ದು ನಿಗಾವಹಿಸಿ

ದೇವದುರ್ಗ ತಾಪಂ ಆವರಣದಲ್ಲಿ ಕುಡಿವ ನೀರಿನ ಟಾಸ್ಕ್‌ಫೋರ್ಸ್ ಸಮಿತಿ ಸಭೆ ನಡೆಯಿತು. ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿ, ತಾಪಂ ಇಒ ಬಸವರಾಜ ಹಟ್ಟಿ, ಪುರಸಭೆ ಮುಖ್ಯಾಧಿಕಾರಿ ಕೆ.ಹಂಪಯ್ಯ, ಪಂಚಾಯತ್‌ರಾಜ್ ಇಲಾಖೆ ಸಹಾಯಕ ನಿರ್ದೇಶಕಿ ರಾಜೇಶ್ವರಿ ಇದ್ದರು.
ದೇವದುರ್ಗ ತಾಪಂ ಆವರಣದಲ್ಲಿ ಕುಡಿವ ನೀರಿನ ಟಾಸ್ಕ್‌ಫೋರ್ಸ್ ಸಮಿತಿ ಸಭೆ ನಡೆಯಿತು. ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿ, ತಾಪಂ ಇಒ ಬಸವರಾಜ ಹಟ್ಟಿ, ಪುರಸಭೆ ಮುಖ್ಯಾಧಿಕಾರಿ ಕೆ.ಹಂಪಯ್ಯ, ಪಂಚಾಯತ್‌ರಾಜ್ ಇಲಾಖೆ ಸಹಾಯಕ ನಿರ್ದೇಶಕಿ ರಾಜೇಶ್ವರಿ ಇದ್ದರು.
Published on

ದೇವದುರ್ಗ: ಬೇಸಿಗೆ ಆರಂಭವಾಗಿದ್ದು ಗ್ರಾಮೀಣ ಭಾಗದಲ್ಲಿ ಜಲ ಸಮಸ್ಯೆ ಹೆಚ್ಚಿದೆ. ಪಿಡಿಒಗಳು ಕೇಂದ್ರ ಸ್ಥಾನದಲ್ಲಿದ್ದುಕೊಂಡು ಕುಡಿವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಬೇಕು ಎಂದು ತಾಪಂ ಇಒ ಬಸವರಾಜ ಹಟ್ಟಿ ಸೂಚಿಸಿದರು.

ಪಟ್ಟಣದ ತಾಪಂ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ ಕುಡಿವ ನೀರಿನ ಟಾಸ್ಕ್‌ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದರು. ಬಲದಂಡೆ ನಾಲೆ ನೀರು ಬಂದ್ ಆಗಿದ್ದರೆ, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ತಗ್ಗಿದೆ. ನೀರಿನ ಮೂಲಗಳನ್ನು ಬಳಸಿಕೊಂಡು ಮಿತ ಬಳಕೆಗೆ ಆದ್ಯತೆ ನೀಡಬೇಕು. ಗ್ರಾಮೀಣ ಭಾಗದಲ್ಲಿ ಜನ-ಜಾನುವಾರುಗಳಿಗೆ ಅಗತ್ಯಕ್ಕೆ ತಕ್ಕಂತೆ ನೀರು ಪೂರೈಸಬೇಕು. ತೀವ್ರ ನೀರಿನ ಕೊರತೆ ಇರುವ ಕಡೆ ಬೋರ್‌ವೆಲ್ ಕೊರೆಸಲು, ಖಾಸಗಿ ಕೊಳವೆಬಾವಿ ಬಾಡಿಗೆ, ಶುದ್ಧ ಕುಡಿವ ನೀರಿನ ಘಟಕ ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಲು, ದುರಸ್ತಿಗೆ ಬಂದ ಆರ್‌ಒ ಪ್ಲಾಂಟ್‌ಗಳಿಗೆ ಬೀಗ ಹಾಕದಿರಲು ಹಾಗೂ ಯಾವುದೇ ಕಾರಣಕ್ಕೂ ಬಂದ್ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದರು.

ಪುರಸಭೆ ಮುಖ್ಯಾಧಿಕಾರಿ ಕೆ.ಹಂಪಯ್ಯ, ಪಂಚಾಯತ್‌ರಾಜ್ ಇಲಾಖೆ ಸಹಾಯಕ ನಿರ್ದೇಶಕಿ ರಾಜೇಶ್ವರಿ, ಜಿಪಂ ಎಇಇ ಹೀರಲಾಲ್ ಹಾಗೂ ವಿವಿಧ ಗ್ರಾಪಂ ಪಿಡಿಒಗಳು ಇದ್ದರು.

ಕೋಟ್: ನದಿದಂಡೆ ಗ್ರಾಮಗಳಲ್ಲಿ ಹೊರಪಡಿಸಿದರೆ ಬೇರೆಕಡೆ ನೀರಿನ ಸಮಸ್ಯೆ ಹೆಚ್ಚಿದೆ. ಇದರ ಪ್ರಮಾಣ ಮುಂದಿನ ದಿನಗಳಲ್ಲಿ ಹೆಚ್ಚಾಗಲಿದೆ. ಇರುವ ನೀರನ್ನು ವ್ಯರ್ಥ ಮಾಡದೆ ಅಗತ್ಯಕ್ಕೆ ತಕ್ಕಂತೆ ಪೂರೈಕೆ ಮಾಡಬೇಕು. ಜನರು ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಬೇಕು. ಪ್ರತಿಯೊಬ್ಬರೂ ಕೇಂದ್ರ ಸ್ಥಾನದಲ್ಲಿ ಇರಲೇಬೇಕು. ನಿರ್ಲಕ್ಷೃ ತೋರುವ ಅಧಿಕಾರಿಗಳ ವಿರುದ್ಧ ಕ್ರಮ ವಹಿಸಲಾಗುವುದು.

> ಚನ್ನಮಲ್ಲಪ್ಪ ಘಂಟಿ ತಹಸೀಲ್ದಾರ್

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net