ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ

kampli library
ಕಂಪ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ಗ್ರಂಥಾಲಯ ಪರಿಚಯ ಕಾರ್ಯಕ್ರಮದಲ್ಲಿ ಸಮಯನ್ವಯ ಅಧಿಕಾರಿ ಡಾ.ಕೆ.ಮಹೇಶ್ ಮಾತನಾಡಿದರು. ಪ್ರಮುಖರಾದ ಎ.ಜಿ.ವೀರಭದ್ರಪ್ಪ, ಟಿ.ಎಂ.ಆರ್.ರಾಜ್ಮಾ, ಮಮತಾ, ಸಂದೀಪ್ ಇದ್ದರು.
Published on

ಕಂಪ್ಲಿ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜು ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಅಡಿಯಲ್ಲಿ 2024-25ನೇ ಸಾಲಿನ ಪ್ರಥಮ ವರ್ಷದ ಬಿಎ, ಬಿಕಾಂ ವಿದ್ಯಾರ್ಥಿಗಳ ಗ್ರಂಥಾಲಯ ಪರಿಚಯ ಕಾರ್ಯಕ್ರಮ ಸೋಮವಾರ ನಡೆಯಿತು.

ಅಂತರಿಕ ಗುಣಮಟ್ಟ ಭರವಸೆ ಕೋಶದ ಸಮನ್ವಯಾಧಿಕಾರಿ ಡಾ.ಕೆ.ಮಹೇಶ್ ಮಾತನಾಡಿ, ವಿದ್ಯಾರ್ಥಿಗಳು ಗ್ರಂಥಾಲಯದ ಸಾಹಿತ್ಯ, ಸಾಹಿತ್ಯೇತರ ಕೃತಿಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು.

ಶೈಕ್ಷಣಿಕ ಸಾಧನೆಯೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಕೌಶಲಕ್ಕಾಗಿ ಸ್ಪರ್ಧಾತ್ಮ ಪುಸ್ತಕಗಳನ್ನು ಅವಲೋಕಿಸಬೇಕು ಎಂದು ಸಲಹೆ ನೀಡಿದರು.

ಗ್ರಂಥಪಾಲಕ ಎ.ಜಿ.ವೀರಭದ್ರಪ್ಪ ಮಾತನಾಡಿ, ಗ್ರಂಥಾಲಯದಲ್ಲಿ ಪಠ್ಯ, ಪಠ್ಯೇತರ, ಸೃಜನಶೀಲ ಸಾಹಿತ್ಯದ ಕೃತಿಗಳಿದ್ದು, ಓದುವ ಮೂಲಕ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಟಿ.ಎಂ.ಆರ್.ರಾಜ್ಮಾ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಮಮತಾ, ಅತಿಥಿ ಉಪನ್ಯಾಸಕ ಸಂಘದ ಅಧ್ಯಕ್ಷ ಸಂದೀಪ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net