ಪರಿಸರದ ಬಗ್ಗೆ ಹೆಚ್ಚಿನ ಅರಿವು ಮತ್ತು ಕಾಳಜಿ ಬೆಳೆಸಿಕೊಳ್ಳಿ: ವರ್ಣಿತ್ ನೇಗಿ

varnith negi
Published on

ಮಡಿಕೇರಿ: ವಿದ್ಯಾರ್ಥಿ ಜೀವನದಲ್ಲಿರುವಾಗಲೇ ಪರಿಸರದ ಬಗ್ಗೆ ಹೆಚ್ಚಿನ ಅರಿವು ಮತ್ತು ಕಾಳಜಿಯನ್ನು ಬೆಳೆಸಿಕೊಳ್ಳಬೇಕು ಎಂದು ಜಿ.ಪಂ.ಸಿಇಒ ವರ್ಣಿತ್ ನೇಗಿ ತಿಳಿಸಿದರು.


ಕೊಡಗು ಜಿಲ್ಲಾ ಪಂಚಾಯತ್ ಮತ್ತು ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಗಾಳಿಬೀಡು ಗ್ರಾಮ ಪಂಚಾಯತಿಯ ಚಪ್ಪಂಡ ಕೆರೆ ಅಮೃತ ಸರೋವರ ದಂಡೆಯಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.


ಪರಿಸರವನ್ನು ಸಂರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಮಕ್ಕಳೆಲ್ಲರೂ ಪರಿಸರ ನಾಯಕರು ಎಂದು ಬಣ್ಣಿಸಿದರು. ಗಿಡ ನೆಡುವುದು ಮಾತ್ರವೇ ಪರಿಸರ ಸಂರಕ್ಷಣೆಯಲ್ಲ. ವಿದ್ಯುತ್‌ನ ಮಿತ ಬಳಕೆ, ಇಂಧನಗಳ ಮಿತ ಬಳಕೆ ಇವೂ ಸಹ ಪರಿಸರ ಸಂರಕ್ಷಣೆಯ ಪ್ರಮುಖ ಭಾಗವಾಗಿದೆ ಎಂದು ಅವರು ತಿಳಿಸಿದರು.


ಇದೇ ವೇಳೆ ಮಹಾತ್ಮಗಾಂಧಿ ನರೇಗಾ ಯೋಜನೆಯಡಿಯಲ್ಲಿ ಅಭಿವೃದ್ಧಿ ಪಡಿಸಲಾಗಿರುವ ಚಪ್ಪಂಡ ಕೆರೆ ಅಮೃತ ಸರೋವರದ ದಂಡೆಯಲ್ಲಿ ಮಾವು, ಹಲಸು ಸೇರಿದಂತೆ ವಿವಿಧ ಬಗೆಯ ಸಸಿಗಳನ್ನು ನೆಡಲಾಯಿತು. ಶಾಲಾ ಮಕ್ಕಳಿಗೆ ಚಿತ್ರಕಲೆ ಸ್ಫರ್ಧೆ ಹಮ್ಮಿಕೊಳ್ಳಲಾಗಿತ್ತು.


ಗಾಳಿಬೀಡು ಗ್ರಾ.ಪಂ.ಅಧ್ಯಕ್ಷೆ ಬಿ.ಜಿ.ಉ?ಾ, ಜಿ.ಪಂ.ಉಪ ಕಾರ್ಯದರ್ಶಿ ಜಿ.ಧನರಾಜು, ತಾ.ಪಂ. ಇಒ ನಾಗಮಣಿ, ಸಹಾಯಕ ನಿರ್ದೇಶಕ ಹೇಮಂತ್, ಸಹಾಯಕ ಜಿಲ್ಲಾ ಕಾರ್ಯಕ್ರಮ ಸಂಯೋಜಕ ಮಹೇಂದ್ರ, ತಾಂತ್ರಿಕ ಸಂಯೋಜಕ ದಿಲೀಪ್, ತಾಲೂಕು ಎಂಐಎಸ್ ಸಂಯೋಜಕಿ ಬಿನ್ಸಿ, ಗ್ರಾ.ಪಂ.ಸಿಬ್ಬಂದಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net