

ಕೊಳ್ಳೇಗಾಲ: ಪಟ್ಟಣದ ಶ್ರೀ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಒಂದು ದಿನದ ಅಂತಾರಾಷ್ಟ್ರೀಯ ಬಹು ಶಿಸ್ತೀಯ ಸಮ್ಮೇಳನ ಹಮ್ಮಿಕೊಳ್ಳಲಾಗಿತ್ತು.
ಮೈಸೂರು ವಿಶ್ವವಿದ್ಯಾಲಯದ ಗಣಕ ವಿಜ್ಞಾನ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ.ಡಿ.ಎಸ್.ಗುರು, ಎಚ್.ಕೆ. ಟ್ರಸ್ಟ್ ಕಾರ್ಯದರ್ಶಿ ಪ್ರೇಮಲತಾ ಕೃಷ್ಣಸ್ವಾಮಿ ಚಾಲನೆ ನೀಡಿದರು.
ಪ್ರಾಧ್ಯಾಪಕ ಡಾ.ಡಿ.ಎಸ್.ಗುರು ಮಾತನಾಡಿ, ಅಧ್ಯಾಪಕರು, ಸಂಶೋಧನಾ ವಿದ್ಯಾರ್ಥಿಗಳು, ಬಹುಶಿಸ್ತೀಯ ಜ್ಞಾನವನ್ನು ಸಂಶೋಧನಾ ಒಲವನ್ನು ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು.
ಪ್ರಾಂಶುಪಾಲೆ ಪ್ರೊ.ಬಿ.ಜಯಲಕ್ಷ್ಮೀ ಮಾತನಾಡಿದರು. ಶ್ರೀ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಮಹದೇವ, ಐಕ್ಯೂಎಸಿ ಸಂಯೋಜಕ ಡಾ.ಜಿ.ಹೇಮಕುಮಾರ್, ಸಂಘಟನಾ ಕಾರ್ಯದರ್ಶಿ ಜಿ.ಕೆ ಡಾ.ವೇಣುಗೋಪಾಲ್ ಇತರರಿದ್ದರು.