

ಶಿವಮೊಗ್ಗ: ಹಾಳಾಗಿರುವ ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕು. ಪೌರ ಕಾರ್ಮಿಕರಿಗೆ ಸರ್ಕಾರದಿಂದ ಉಪಹಾರ ವ್ಯವಸ್ಥೆ ಮಾಡಬೇಕು. ಸರ್ಕಾರಿ ನೌಕರರಿಗೆ ಹಾಗೂ ಪೋಲೀಸ್ ಸಿಬ್ಬಂದಿಗೆ ವಸತಿ ಗೃಹ ನಿರ್ಮಾಣ ಮಾಡಬೇಕು ಎಂದು ರಾಜ್ಯ ಮಾಜಿ ಶಾಸಕರ ವೇದಿಕೆ ಅಧ್ಯಕ್ಷ ಎಚ್.ಎಂ.ಚಂದ್ರಶೇಖರಪ್ಪ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಸರ್ಕಾರಿ ಶಾಲೆಗಳನ್ನು ನವೀಕರಿಸಬೇಕು. ಮಕ್ಕಳಿಗೆ ಉತ್ತಮ ಸಮವಸ್ತ್ರ ನೀಡಬೇಕು. ವಾರದಲ್ಲಿ 6 ದಿನ ಹಾಲು, ಬಾಳೇಹಣ್ಣು ಮತ್ತು ಮೊಟ್ಟೆ ವಿತರಿಸಬೇಕು. ಸಣ್ಣ ರೈತರಿಗೆ ಉಚಿತವಾಗಿ ಗೊಬ್ಬರ, ಔಷಧ ನೀಡಬೇಕು. ದೆಹಲಿಯ ಕರ್ನಾಟಕ ಭವನದಲ್ಲಿ ಶಾಸಕರಿಗೆ ಹಾಗೂ ಮಾಜಿ ಶಾಸಕರಿಗೆ ಸರ್ಕಾರಿ ದರದಲ್ಲಿ ಕಾರಿನ ವ್ಯವಸ್ಥೆ ಮಾಡಬೇಕು. ಪತ್ರಕರ್ತರ ಮಾಸಾಶನವನ್ನು 15 ಸಾವಿರ ರೂ.ಗೆ ನಿಗದಿ ಮಾಡಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಆಶ್ರಯ ಯೋಜನೆಯಡಿಯಲ್ಲಿ 20* 30 ನಿವೇಶನ ಮಂಜೂರು ಮಾಡಬೇಕು. ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸಬೇಕು ಎಂದರು.ಮಾಜಿ ಶಾಸಕ ಕೆ.ಜಿ.ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿದ್ದರು.