

ಬಳ್ಳಾರಿ: ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಶಿಸ್ತು, ತಾಳ್ಮೆ, ನಾಯಕತ್ವ ಗುಣ ಹೆಚ್ಚಿಸುತ್ತದೆ ಎಂದು ಎಸ್‌ಎಸ್‌ಎ ಕಾಲೇಜಿನ ಪ್ರಾಚಾರ್ಯ ಡಾ.ಸಿ.ಎಚ್.ಸೋಮನಾಥ ಹೇಳಿದರು.
ಇದನ್ನೂ ಓದಿ:ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ
ತಾಲೂಕಿನ ಕಪ್ಪಗಲ್ ಗ್ರಾಮದಲ್ಲಿ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಆಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ನೆಸ್ಸೆಸ್ ಘಟಕದಿಂದ ಮಂಗಳವಾರ ಹಮ್ಮಿಕೊಂಡಿದ್ದ ವಾರ್ಷಿಕ ವಿಶೇಷ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿದರು. ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರಗಳು ವಿದ್ಯಾರ್ಥಿಗಳಲ್ಲಿ ವೈಯಕ್ತಿಕ ಗುರುತಿಸುವಿಕೆ, ಸಮಗ್ರತೆ ಮತ್ತು ಜವಾಬ್ದಾರಿಗಳನ್ನು ಅಭಿವೃದ್ಧಿಪಡಿಸುತ್ತದೆ ಎಂದರು.
ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿ ಜೀವನದಿಂದಲೇ ಸಮುದಾಯದ ಜತೆ ಸಹಬಾಳ್ವೆ ಬೆಳೆಸಿಕೊಂಡಾಗ ಉತ್ತಮ ನಾಗರಿಕರಾಗಲು ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರ ಹಾಕಲು ವಿಶೇಷ ಶಿಬಿರ ಉತ್ತಮ ವೇದಿಕೆಯಾದೆ ಎಂದು ಸಿ.ಎಚ್.ಸೋಮನಾಥ ತಿಳಿಸಿದರು.