ಸವಾಲು ಎದುರಿಸುವ ಸಾಮರ್ಥ್ಯ ಬೆಳೆಸಿಕೊಳ್ಳಿ

20
Published on

ಮೈಸೂರು: ಸರಸ್ವತಿಪುರಂನಲ್ಲಿರುವ ಶ್ರೀಕೃಷ್ಣಧಾಮದಲ್ಲಿ ಶ್ರೀಕೃಷ್ಣ ಮಿತ್ರ ಮಂಡಳಿ ಹಾಗೂ ಶ್ರೀಕೃಷ್ಣ ಟ್ರಸ್ಟ್‌ನಿಂದ ಎಸ್‌ಎಸ್‌ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ತ್ರಿಮತಸ್ಥ ಬ್ರಾಹ್ಮಣ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಇತ್ತೀಚೆಗೆ ಪುರಸ್ಕರಿಸಲಾಯಿತು.
ಶಾಲಾ ಶಿಕ್ಷಣ ಇಲಾಖೆ ಸಹ ನಿರ್ದೇಶಕ ಆರ್. ರಘುನಂದನ್ ಮಾತನಾಡಿ, ಕೆಲಸದಲ್ಲಿ ಶ್ರದ್ಧೆ, ನಿಷ್ಠೆ ಮತ್ತು ನೈತಿಕ ಮೌಲ್ಯ ಇರಬೇಕು. ಮರಳಿ ಯತ್ನವ ಮಾಡು ಎಂಬ ಮಾತಿನಂತೆ ನಿರಂತರ ಪ್ರಯತ್ನದಿಂದ ಮಾತ್ರ ಯಶಸ್ಸು ಸಿಗಬಲ್ಲದು. ಜತೆಗೆ ಜೀವನದ ಸವಾಲನ್ನು ಎದುರಿಸುವ ಶಕ್ತಿ, ಸಾಮರ್ಥ್ಯ ಬೆಳೆಸಿಕೊಳ್ಳಬೇಕು. ಸಾಧನೆಯ ಮೆಟ್ಟಿಲನ್ನು ಏರುವ ತುಡಿತ ನಮ್ಮಲ್ಲಿರಬೇಕು. ನಮ್ಮ ಸಾಧನೆ ಮುಂದಿನ ಜನಾಂಗಕ್ಕೆ ಪ್ರೇರಣೆಯಾಗಬೇಕು ಎಂದರು.
ಶ್ರೀಕೃಷ್ಣ ಮಿತ್ರ ಮಂಡಳಿಯ ಅಧ್ಯಕ್ಷ ಪಿ.ಜಿ.ಪ್ರವೀಣ್, ಶ್ರೀಕೃಷ್ಣ ಟ್ರಸ್ಟ್ ನ ಉಪಾಧ್ಯಕ್ಷ ರವಿಶಾಸ್ತ್ರಿ, ಕೃಷ್ಣಮಿತ್ರ ಮಂಡಳಿ ಉಪಾಧ್ಯಕ್ಷ ಗೋಪಾಲಕೃಷ್ಣ, ಕಾರ್ಯದರ್ಶಿ ಬಿ.ಎಸ್. ರಾಘವೇಂದ್ರಪ್ರಸಾದ್, ಖಜಾಂಚಿ ಸುಬ್ರಹ್ಮಣ್ಯರಾವ್, ಕೃಷ್ಣ ಟ್ರಸ್ಟ್ ಸಹ ಕಾರ್ಯದರ್ಶಿ ಕಿರಣ್ ತಂತ್ರಿ, ಶ್ರೀಕೃಷ್ಣ ಮಿತ್ರ ಮಂಡಳಿ ಖಜಾಂಚಿ ಸುಬ್ರಮಣ್ಯರಾವ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net