ಕ್ರೀಡೆಯಿಂದ ಮಕ್ಕಳಲ್ಲಿ ಪ್ರೀತಿ, ಸ್ನೇಹ, ವಿಶ್ವಾಸ ವೃದ್ಧಿ

05-GPT-3
ಗುಂಡ್ಲುಪೇಟೆ ತಾಲೂಕಿನ ವಡ್ಡಗೆರೆ ಗ್ರಾಮದ ಟಿ.ಎಸ್.ಸುಬ್ಬಣ್ಣ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಅಂತರಪ್ರೌಢಶಾಲಾ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಯನ್ನು ಸಿ.ಎಸ್.ನಿರಂಜನಕುಮಾರ್ ಉದ್ಘಾಟಿಸಿದರು. ಮಹದೇವಮ್ಮ, ಶಶಿಕಾಂತ್, ಜಿ.ಸಿ.ರಾಜಣ್ಣ, ಹರೀಶ್, ಮಲ್ಲಿಕಾರ್ಜುನಪ್ಪ, ನಾಗಮಲ್ಲಪ್ಪ, ಚನ್ನಬಸವರಾಜು, ರಾಜೇಗೌಡ, ಸಹಶಿಕ್ಷಕ ರಾಜಣ್ಣ ಇದ್ದರು.
Published on

ಗುಂಡ್ಲುಪೇಟೆ: ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಲ್ಲಿ ಸೋಲು, ಗೆಲುವುಗಳಿಗಿಂತ ಪ್ರೀತಿ, ಸ್ನೇಹ, ವಿಶ್ವಾಸ ವೃದ್ಧಿಸುತ್ತವೆ ಎಂದು ಮಾಜಿ ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು.
ತಾಲೂಕಿನ ವಡ್ಡಗೆರೆ ಗ್ರಾಮದ ಟಿ.ಎಸ್.ಸುಬ್ಬಣ್ಣ ಪ್ರೌಢಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ಅಂತರ ಪ್ರೌಢಶಾಲಾ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯ ಪೂರ್ವದಲ್ಲಿಯೇ ಟಿ.ಎಸ್.ಸುಬ್ಬಣ್ಣ ಅವರು ಕುಗ್ರಾಮಗಳಲ್ಲಿ ಶಾಲೆಗಳನ್ನು ಆರಂಭಿಸಿ ಗ್ರಾಮೀಣ ಪ್ರದೇಶಗಳ ಮಕ್ಕಳಿಗೆ ಶಿಕ್ಷಣ ದೊರಕುವಂತೆ ಮಾಡಿದ್ದರು. ಅವರ ಆದರ್ಶಗಳನ್ನು ಇಂದಿನ ಪೀಳಿಗೆ ಸದಾಕಾಲ ಸ್ಮರಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಹದೇವಮ್ಮ, ಪಿಎಸಿಸಿ ಬ್ಯಾಂಕ್ ಅಧ್ಯಕ್ಷ ಶಶಿಕಾಂತ್, ಸಂಸ್ಥೆಯ ಕಾರ್ಯದರ್ಶಿ ಜಿ.ಸಿ.ರಾಜಣ್ಣ, ಖಜಾಂಚಿ ಹರೀಶ್, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನಪ್ಪ, ಉಪಾಧ್ಯಕ್ಷ ನಾಗಮಲ್ಲಪ್ಪ, ಕಾರ್ಯದರ್ಶಿ ಚನ್ನಬಸವರಾಜು, ಮುಖ್ಯ ಶಿಕ್ಷಕ ರಾಜೇಗೌಡ, ಸಹ ಶಿಕ್ಷಕ ರಾಜಣ್ಣ ಸೇರಿದಂತೆ ಹಲವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net