ಜನಸಂಖ್ಯೆ ಹೆಚ್ಚಳದಿಂದ ಅಭಿವೃದ್ಧಿ ಕುಂಠಿತ

janasankhya dinacharane
janasankhya dinacharane
Published on

ಹೆಬ್ರಿ: ಜನಸಂಖ್ಯೆಯ ಹೆಚ್ಚಳದಿಂದ ಬಡತನ, ಅನಾರೋಗ್ಯ, ಶಿಕ್ಷಣ, ಉದ್ಯೋಗಾವಕಾಶಗಳ ಕೊರತೆಯುಂಟಾಗಿ ಮೂಲಭೂತ ಸೌಲಭ್ಯ ಪಡೆಯುವುದು ಸವಾಲಾಗಿದೆ. ಈ ನಿಟ್ಟಿನಲ್ಲಿ ಮಹಿಳೆಯರು ಜಾಗೃತರಾಗಿ ಮಹಿಳಾ ಸಬಲೀಕರಣ, ಕುಟುಂಬ ಯೋಜನೆ, ಆರೋಗ್ಯ ಸೌಲಭ್ಯಗಳ ಅರಿವು ಪಡೆದುಕೊಳ್ಳಬೇಕು ಎಂದು ಮುದ್ರಾಡಿ ಪ್ರೌಢಶಾಲೆ ಮುಖ್ಯಶಿಕ್ಷಕ ಬಲ್ಲಾಡಿ ಚಂದ್ರಶೇಖರ ಭಟ್ ಹೇಳಿದರು.

ಮುದ್ರಾಡಿ ಎಂಎನ್‌ಡಿಎಸ್‌ಎಂ ಅನುದಾನಿತ ಪ್ರೌಢಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಿ, ಮಾತನಾಡಿದರು.

ಶಿಕ್ಷಕಿ ಚಂದ್ರಕಾಂತಿ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ರಘುಪತಿ ಹೆಬ್ಬಾರ್ ವಂದಿಸಿದರು. ಶಿಕ್ಷಕರಾದ ಮಹೇಶ್ ನಾಯ್ಕ ಕೆ., ಶ್ಯಾಮಲಾ ಸಹಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net