

ಕುಂಬಳೆ: ಎಳವೆಯಲ್ಲಿಯೇ ಗುಣಮಟ್ಟದ ಶಿಕ್ಷಣ ಮಕ್ಕಳಿಗೆ ದೊರೆತಾಗ ಅವರು ವಿಕಸಿತರಾಗಿ ದೇಶದ ಸತ್ಪ್ರಜೆಗಳಾಗಿ ಬಾಳುತ್ತಾರೆ. ಆಧುನಿಕ ತಂತ್ರಜ್ಞಾನಗಳನ್ನು ಅವಶ್ಯಕತೆಗಳಿಗಾಗಿ ಮಾತ್ರ ಉಪಯೋಗಿಸಬೇಕು ಎಂದು ಕಾಸರಗೋಡು ಜಿಲ್ಲಾ ಶಿಕ್ಷಣಾಧಿಕಾರಿ ದಿನೇಶ್ ವಿ. ಹೇಳಿದರು.
ಶನಿವಾರ ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದ ವರ್ಧ್ಯಂತ್ಯುತ್ಸವದಲ್ಲಿ ಮಾತನಾಡಿದರು. ನಿವೃತ್ತರಾಗಲಿರುವ ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು. ಪತ್ರಕರ್ತ ರವಿಶಂಕರ ಭಟ್ ಕೋಡಿಮೂಲೆ, ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಬೆಜಪ್ಪೆ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಬೋನಂತಾಯ ಶಿವಶಂಕರ ಭಟ್, ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಬಾಲಸುಬ್ರಹ್ಮಣ್ಯ ಭಟ್ ಚೆಕ್ಕಣಿಕೆ ಶುಭಹಾರೈಸಿದರು. ಆಡಳಿತ ಮಂಡಳಿ ಜತೆಕಾರ್ಯದರ್ಶಿ ಬಾಲಕೃಷ್ಣ ಶರ್ಮ ಅನಂತಪುರ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಎನ್.ರಾವ್ ಮನ್ನಿಪ್ಪಾಡಿ, ಶ್ಯಾಮರಾಜ್ ದೊಡ್ಡಮಾಣಿ, ರವಿನಾರಾಯಣ ಗುಣಾಜೆ, ಎಚ್.ಎಸ್.ಪ್ರಸಾದ ಹಿಳ್ಳೆಮನೆ, ಮುಳ್ಳೇರಿಯ ಮಂಡಲ ಅಧ್ಯಕ್ಷ ಕೃಷ್ಣಮೂರ್ತಿ ಮಾಡಾವು ಹಾಗೂ ಗಣ್ಯರು ಪಾಲ್ಗೊಂಡಿದ್ದರು.
ಶಿಕ್ಷಕಿ ಅನ್ವಿತಾ ಕೆ. ಸ್ವಾಗತಿಸಿದರು. ಮುಖ್ಯಶಿಕ್ಷಕಿ ಶ್ಯಾಂ ಭಟ್ ದರ್ಭೆಮಾರ್ಗ ವಂದಿಸಿದರು. ವಿದ್ಯಾರ್ಥಿ ಶಾಶ್ವತ್ ನಿರೂಪಿಸಿದರು. ಸಹ ಮುಖ್ಯಶಿಕ್ಷಕಿ ಚಿತ್ರಾಸರಸ್ವತಿ ವಾರ್ಷಿಕ ವರದಿ ಮಂಡಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.