ಬನ್ನೇರುಘಟ್ಟ ಉದ್ಯಾನ ಅಭಿವೃದ್ಧಿ, ಕಂದಾಯ ಸಚಿವ ಆರ್.ಅಶೋಕ್ ಭರವಸೆ, ಜೈವಿಕ ಉದ್ಯಾನಕ್ಕೆ ಭೇಟಿ

08ank news and photos 02..
Published on

ಆನೇಕಲ್: ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಪ್ರತಿದಿನ 17 ಸಾವಿರ ಪ್ರವಾಸಿಗರು ಭೇಟಿ ನೀಡುತ್ತಿದ್ದು, ವಾರ್ಷಿಕವಾಗಿ 35ಕೋಟಿ ರೂ.ಗೂ ಹೆಚ್ಚು ಆದಾಯ ಬರುತ್ತಿದೆ. ಇಲ್ಲಿ ಇನ್ನಷ್ಟ್ಟು ಅಭಿವೃದ್ಧಿ ಕಾರ್ಯಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಭಾನುವಾರ ಭೇಟಿ ನೀಡಿ ಮಾತನಾಡಿದರು.

ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ. ಸರ್ಕಾರದ ಸಾಧನೆಗಳ ಬಗ್ಗೆ ಜನರು ವಿಶ್ವಾಸ ಹೊಂದಿದ್ದು, ಉಪಚುನಾವಣೆಯಲ್ಲಿ ಗೆಲುವು ನೀಡಲಿದ್ದಾರೆ ಎಂದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿಯಿಲ್ಲ. ಹಾಗಾಗಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರು. ಶಾಸಕ ಎಂ.ಕೃಷ್ಣಪ್ಪ, ಬಿಜೆಪಿ ಮಂಡಲ ಅಧ್ಯಕ್ಷ ರಾಜಶೇಖರರೆಡ್ಡಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net