ಸಂಘಟನೆಯಿಂದ ಸಮಾಜದ ಅಭಿವೃದ್ಧಿ

29 hkr 04 MADIVAL
Published on

ಹಿರೇಕೆರೂರ: ಮಡಿವಾಳ ಸಮಾಜದವರು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಒಗ್ಗಟ್ಟಿನಿಂದ ಸಂಘಟಿತರಾಗುವುದು ಅವಶ್ಯವಿದೆ ಎಂದು ಚಿತ್ರದುರ್ಗದ ಮಡಿವಾಳ ಗುರುಪೀಠದ ಡಾ. ಬಸವ ಮಾಚಿದೇವ ಸ್ವಾಮೀಜಿ ಹೇಳಿದರು.

ಶ್ರಾವಣ ಮಾಸದ ನಿಮಿತ್ತ ಪಟ್ಟಣದ ಚನ್ನಳ್ಳಿ ರಸ್ತೆಯಲ್ಲಿನ ಮಡಿವಾಳ ಮಾಚಿದೇವ ಸಭಾಭವನದಲ್ಲಿ ಮಡಿವಾಳ ಸಮಾಜದಿಂದ ಮಂಗಳವಾರ ಏರ್ಪಡಿಸಿದ್ದ ಮನ ಮನೆಗೆ ಮಾಚಿದೇವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದ ಪ್ರತಿಯೊಬ್ಬರೂ ಸಂಘಟಿತರಾದರೆ ಮಾತ್ರ ಸರ್ಕಾರದ ಸೌಲಭ್ಯ ಪಡೆಯಲು ಸಾಧ್ಯ. ಸಮಾಜದ ಏಳಿಗೆಯಲ್ಲಿ ನಮ್ಮ ಪ್ರಗತಿಯೂ ಅಡಗಿದೆ ಎಂಬುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದರು.

ಶಾಸಕ ಯು.ಬಿ. ಬಣಕಾರ ಮಾತನಾಡಿ, ಈ ಹಿಂದೆ ನಾನು ಹಾಗೂ ಮಾಜಿ ಸಚಿವ ಬಿ.ಸಿ. ಪಾಟೀಲರ ನೇತೃತ್ವದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಪಟ್ಟಣದಲ್ಲಿ ಮಡಿವಾಳ ಮಾಚಿದೇವ ಸಮುದಾಯ ಭವನ ನಿರ್ವಿುಸಲಾಗಿದೆ. ಇದನ್ನು ಸ್ವಚ್ಛ ಹಾಗೂ ಸುಂದರವಾಗಿಟ್ಟುಕೊಂಡು ಒಳ್ಳೆಯ ಕೆಲಸಗಳಿಗೆ ಸದ್ಬಳಕೆ ಮಾಡಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಸಮಾಜದ ಮತ್ತಷ್ಟು ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಸಮುದಾಯ ಭವನದ ಅಭಿವೃದ್ಧಿಗಾಗಿ ನನ್ನ ಅನುದಾನದಲ್ಲಿ 10 ಲಕ್ಷ ರೂ. ನೀಡಲಾಗುವುದು ಎಂದು ಭರವಸೆ ನೀಡಿದರು.

ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಸಮಾಜದ 20 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಮಡಿವಾಳರ ಸಮಾಜದ ತಾಲೂಕಾಧ್ಯಕ್ಷ ರಮೇಶ ಮಡಿವಾಳರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಡಿವಾಳ ಸಮಾಜದ ಅಧ್ಯಕ್ಷ ಸುರೇಶ ಮಡಿವಾಳರ, ಸಿದ್ದಲಿಂಗಪ್ಪ ಮಡಿವಾಳರ, ಸುಭಾಸ ಮಡಿವಾಳರ, ಮಹೇಶ ಮಡಿವಾಳರ, ಸುಭಾಸ ಎಂ., ಚಂದ್ರಪ್ಪ ಮಡಿವಾಳರ, ಮಂಜಪ್ಪ ಮಡಿವಾಳರ, ಕುಮಾರ ಮಡಿವಾಳರ, ಕೊಟೇಶ ಮಡಿವಾಳರ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net