186 ಕೋಟಿ ರೂ. ವೆಚ್ಚದಲ್ಲಿ ತರೀಕೆರೆ ಪಟ್ಟಣದ ಅಭಿವೃದ್ಧಿ

TKE 1 (MLA)
Published on

ತರೀಕೆರೆ: ಎಂಟು ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಪಟ್ಟಣದ ಪುರಸಭೆ ಹೊಸ ಕಟ್ಟಡ ವಿಶೇಷ ವಿನ್ಯಾಸದೊಂದಿಗೆ 14 ತಿಂಗಳಲ್ಲಿ ಪೂರ್ಣಗೊಳಿಸುವ ಚಿಂತನೆ ಇದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಮುಖ್ಯಮಂತ್ರಿಗಳ ಎಸ್‌ಎ್ಸಿ ವಿಶೇಷ ಅನುದಾನದ 5 ಕೋಟಿ ರೂ.ಬಳಸಿ ಅಭಿವೃದ್ಧಿಪಡಿಸುತ್ತಿರುವ ವಿವಿಧ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಎರಡು ವರ್ಷದ ಆಡಳಿತಾವಧಿಯಲ್ಲಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ 186 ಕೋಟಿ ರೂ ಅನುದಾನ ಬಿಡುಗಡೆ ಮಾಡಿ ವಿನಿಯೋಗಿಸಲಾಗಿದೆ. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನೂತನವಾಗಿ ನಿರ್ಮಿಸಲು ಕಾರ್ಯಾದೇಶವಾಗಿದ್ದು, ಮುಂದಿನ ವಾರ ಕಾಮಗಾರಿ ಆರಂಭವಾಗಲಿದೆ. ನೂತನ ಬಸ್‌ನಿಲ್ದಾಣದಲ್ಲಿ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕೊಠಡಿ, ಅಂಗವಿಕಲರಿಗೆ ವಿಶೇಷ ಶೌಚಗೃಹದ ವ್ಯವಸ್ಥೆ ಮಾಡಲಾಗುವುದು ಎಂದರು.

ಪುರಸಭೆ ಅಧ್ಯಕ್ಷ ವಸಂತ್‌ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್‌ಕುಮಾರ್, ಸದಸ್ಯರಾದ ಟಿ.ದಾದಾಪೀರ್, ಆರ್.ಕುಮಾರಪ್ಪ, ಟಿ.ಆರ್.ಚಂದ್ರಶೇಖರ್, ಎಂ.ಗಿರಿಜಾ, ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ, ಸೇವಾದಳದ ಅಧ್ಯಕ್ಷ ಟಿ.ಎನ್.ಜಗದೀಶ್, ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್, ಎಇಇ ಜಿ.ಎ.ನಾಗೇಂದ್ರಪ್ಪ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net