ಬಿಜೆಪಿ ಯೋಜನೆಗಳಿಂದ ದೇಶದ ಅಭಿವೃದ್ಧಿ

New Somanna bjp New
Published on

ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಆಡಳಿತ ಇಡೀ ವಿಶ್ವದ ಗಮನ ಸೆಳೆದಿದೆ. ಕಳೆದ 11 ವರ್ಷಗಳಲ್ಲಿ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಅನುಷ್ಠಾನಗೊಳಿಸಿದ ಯೋಜನೆಗಳಿಂದಾಗಿ ದೇಶ ಅಭಿವೃದ್ಧಿ ಪಥದಲ್ಲಿ ಮುನ್ನುಗ್ಗುತ್ತಿದೆ ಎಂದು ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.

ಇಲ್ಲಿನ ಅರವಿಂದ ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ‘ಮೋದಿ ಸರ್ಕಾರಕ್ಕೆ 11 ವರ್ಷ- ಸಂಕಲ್ಪದೊಂದಿಗೆ ಸಾಧನೆವರೆಗೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಧಾನಿ ಮೋದಿ ಅವರು ಭಯೋತ್ಪಾದನೆ ವಿರುದ್ಧ ಇಡೀ ವಿಶ್ವದ ಗಮನ ಸೆಳೆದರು. ಆಪರೇಷನ್ ಸಿಂಧೂರ್​ಗೆ ಇಡೀ ಜಗತ್ತಿನ ಬೆಂಬಲ ಪಡೆದರು ಎಂದು ತಿಳಿಸಿದರು.

ಈ ಹಿಂದಿನ ಸರ್ಕಾರಗಳು ಕೇವಲ ಬಡವರ ಪರ ಘೋಷಣೆಗಳಿಗೆ ಮಾತ್ರ ಸೀಮಿತವಾಗಿದ್ದವು. ಆದರೆ, ಕೋಟ್ಯಂತರ ಜನರನ್ನು ಕಡುಬಡತನದಿಂದ ಪಾರು ಮಾಡಿದ ಕೀರ್ತಿ ಮೋದಿ ಸರ್ಕಾರಕ್ಕೆ ಲಭಿಸುತ್ತದೆ ಎಂದರು.

ರಾಜ್ಯದ ಎರಡನೇ ದೊಡ್ಡ ಮಹಾನಗರ ಹುಬ್ಬಳ್ಳಿ-ಧಾರವಾಡ ಅಭಿವೃದ್ಧಿ ಹೊಂದುತ್ತಿದ್ದು, ಬೆಂಗಳೂರು ಮಟ್ದಲ್ಲಿ ವೇಗವಾಗಿ ಬೆಳೆಯುತ್ತಿದೆ. ಕೇಂದ್ರದ ಅನುದಾನದಡಿ ಹಲವಾರು ಯೋಜನೆಗಳು ಅವಳಿ ನಗರದಲ್ಲಿ ಅನುಷ್ಠಾನಗೊಂಡಿವೆ ಎಂದು ಹೇಳಿದರು.

ಶಾಸಕ ಎಂ.ಆರ್. ಪಾಟೀಲ, ಮಾಜಿ ಶಾಸಕರಾದ ಅಮೃತ ದೇಸಾಯಿ, ಸೀಮಾ ಮಸೂತಿ, ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ಮಹಾನಗರ ಜಿಲ್ಲಾ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಗ್ರಾಮೀಣ ಅಧ್ಯಕ್ಷ ನಿಂಗಪ್ಪ ಸುತಗಟ್ಟಿ, ಸಂಜಯ ಕಪಟಕರ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net