ತಳಮಟ್ಟದಲ್ಲಿ ಅಭಿವೃದ್ಧಿ ಕಾರ್ಯ

Ism_work
Published on

ಪುತ್ತೂರು ಗ್ರಾಮಾಂತರ: ಕಳೆದ ಸಾಲಿನಲ್ಲಿ ಕೆಯ್ಯೂರು ಗ್ರಾಮಕ್ಕೆ ಅತಿಹೆಚ್ಚು ಒಟ್ಟು 4.40 ಕೋಟಿ ರೂ.ಅನುದಾನದ ಕಾಮಗಾರಿಗಳನ್ನು ನೀಡಲಾಗಿದೆ. ಅನುದಾನ ತರಿಸಿಕೊಂಡು ನಿರಂತರವಾಗಿ ಅಭಿವೃದ್ಧಿ ಕಾರ್ಯಗಳನ್ನು ನಾನು ಮಾಡುತ್ತೇನೆ. ನಾವು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಜನತೆಗೆ ತಿಳಿಸುವ ಜತೆಗೆ ಅಕ್ರಮ ಸಕ್ರಮ, 94ಸಿ ಆಗದಿರುವವರಿಗೆ ಹಾಗೂ ಅನಾರೋಗ್ಯ ಸೇರಿದಂತೆ ಕಷ್ಟದಲ್ಲಿರುವವರಿಗೆ ಪಕ್ಷ ನೋಡದೆ ಸ್ಪಂದನೆ ನೀಡುವ ಕೆಲಸವನ್ನು ಬೂತ್, ವಲಯದ ಅಧ್ಯಕ್ಷರು ಮತ್ತು ಕಾರ್ಯಕರ್ತರು ತಳಮಟ್ಟದಲ್ಲಿ ಮಾಡಬೇಕು ಎಂದು ಶಾಸಕ ಅಶೋಕ್‌ಕುಮಾರ್ ರೈ ಹೇಳಿದರು.

ಕರ್ನಾಟಕ ನೀರಾವರಿ ನಿಗಮದ ಮೂಲಕ 2 ಕೋಟಿ ರೂ.ವೆಚ್ಚದಲ್ಲಿ ಅನುಷ್ಠಾನಗೊಳ್ಳಲಿರುವ ಶೇಖಮಲೆ-ದೇರ್ಲ ರಸ್ತೆ ಭಾಗದ ಕಾಂಕ್ರೀಟ್ ಕಾಮಗಾರಿಗೆ ಭಾನುವಾರ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಮಾತನಾಡಿ, ತಾ.ಪಂ.ಜಿ.ಪಂ. ಚುನಾವಣೆ ಬರುತ್ತಿದೆ. ಈ ಚುನಾವಣೆಗಳನ್ನು ಎದುರಿಸಲು ಸಿದ್ಧವಾಗುವ ರೀತಿಯಲ್ಲಿ ಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಕೆಯ್ಯೂರು ಗ್ರಾ.ಪಂ.ಸದಸ್ಯ ಬಟ್ಯಪ್ಪ ರೈ ದೇರ್ಲ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಜಿ.ಪಂ.ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಕೆಯ್ಯೂರು ದುರ್ಗಾಪರಮೇಶ್ವರಿ-ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಕೆ.ಜಯರಾಮ ರೈ, ಮಾಜಿ ಅಧ್ಯಕ್ಷ ಚೆನ್ನಪ್ಪ ರೈ ದೇರ್ಲ, ಕಾಂಗ್ರೆಸ್ ವಲಯಾಧ್ಯಕ್ಷ ಜಯಂತ ಪೂಜಾರಿ ಕೆಂಗುಡೇಲು, ಪ್ರಧಾನ ಕಾರ್ಯದರ್ಶಿ ಹನೀಫ್ ಮಾಡಾವು, ಗ್ರಾ.ಪಂ.ಸದಸ್ಯ ಎ.ಕೆ.ಅಬ್ದುಲ್ ಖಾದರ್ ಮೇರ್ಲ, ಸ್ಥಳೀಯ ಮುಖಂಡರಾದ ಸಂತೋಷ್ ರೈ ಇಳಂತಾಜೆ, ದಾಮೋದರ ಪೂಜಾರಿ ಕೆಂಗುಡೇಲು, ಶಿವರಂಜನ್ ರೈ ದೇರ್ಲ, ಗೋಪಾಲಕೃಷ್ಣ ಭಟ್, ಅಶೋಕ್ ರೈ ದೇರ್ಲ, ಹರಿನಾಥ್ ಇಳಂತಾಜೆ, ಅಮರನಾಥ ರೈ ದೇರ್ಲ, ಬಾಬು ಪಾಟಾಳಿ, ರವೀಂದ್ರ ಶೆಟ್ಟಿ ಇಳಂತಾಜೆ, ಜಯರಾಮ ಶೆಟ್ಟಿ ದೇರ್ಲ, ಇಂಜಿನಿಯರ್ ಅಶ್ರಫ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net