ಬಡಾವಣೆಗೆ ವ್ಯವಸ್ಥಿತ ಯೋಜನೆ ಅವಶ್ಯಕ: ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಹೇಳಿಕೆ

06_12_Mdy_04(Minister Kcn)
Published on

ಮಂಡ್ಯ: ನಗರ ಪ್ರದೇಶಗಳಲ್ಲಿ ಬಡಾವಣೆಗಳನ್ನು ನಿರ್ಮಿಸುವಾಗ ಒಳಚರಂಡಿ, ಕುಡಿಯುವ ನೀರು, ರಸ್ತೆ ಸೇರಿದಂತೆ ವಿವಿಧ ಮೂಲ ಸೌಕರ್ಯ ವ್ಯವಸ್ಥೆ ಸೇರಿದಂತೆ ಸ್ಥಳ ನೋಡಿ ವ್ಯವಸ್ಥಿತ ಯೋಜನೆ ಅವಶ್ಯಕ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ತಿಳಿಸಿದರು.
ಇಲ್ಲಿನ ವಿವೇಕಾನಂದನಗರ ಬಡಾವಣೆಯಲ್ಲಿ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಠೇವಣಿ ಕೊಡುಗೆ ಕಾಮಗಾರಿಯಡಿ ಆಯೋಜಿಸಿದ್ದ ಕುಡಿಯುವ ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆ ಕಲ್ಪಿಸುವ 1646 ಲಕ್ಷ ರೂ ವೆಚ್ಚದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಕೆರೆಯನ್ನು ಮುಚ್ಚಿ ಬಡಾವಣೆ ನಿರ್ಮಿಸಿದರೆ, ಮಳೆ ಬಂದಂತಹ ಸಂದರ್ಭದಲ್ಲಿ ಮೂಲ ವ್ಯವಸ್ಥೆಗಳನ್ನು ಕಲ್ಪಿಸುವುದು ಕಷ್ಟಕರವಾಗುತ್ತದೆ. ಜನರು ಕಷ್ಟಪಟ್ಟು ಸಂಪಾದನೆ ಮಾಡಿದ ಹಣವನ್ನು ನೀಡಿ ನಿವೇಶನ ಖರೀದಿಸುತ್ತಾರೆ. ಅವರಿಗೆ ಎಲ್ಲ ರೀತಿಯ ಮೂಲ ವ್ಯವಸ್ಥೆ ಕಲ್ಪಿಸಬೇಕಾಗುತ್ತದೆ ಎಂದು ಹೇಳಿದರು.
ಶಾಸಕ ಎಂ.ಶ್ರೀನಿವಾಸ್, ಮುಡಾ ಅಧ್ಯಕ್ಷ ಕೆ.ಶ್ರೀನಿವಾಸ್, ಸದಸ್ಯ ಹನುಮಂತು, ಕೃಷ್ಣೇಗೌಡ, ಪುಟ್ಟರ್ ಮಲ್ಜೈನ್, ನಾಗೇಶ್, ಶಿವಮ್ಮ, ನಗರಸಭೆ ಅಧ್ಯಕ್ಷ ಎಚ್.ಎಸ್.ಮಂಜು, ಜಿಪಂ ಮಾಜಿ ಸದಸ್ಯ ಚಂದಗಾಲು ಶಿವಣ್ಣ, ಕಾರ್ಯಪಾಲಕ ಇಂಜಿನಿಯರ್ ಜೈ ಕುಮಾರ್, ಎಇಇ ಮೇಘ, ಎಇ ಆದರ್ಶ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net