ಜನರ ಬೇಡಿಕೆಯಂತೆ ಅಭಿವೃದ್ಧಿ ಕಾರ್ಯಗಳಾಗಿವೆ

ಜನರ ಬೇಡಿಕೆಯಂತೆ ಅಭಿವೃದ್ಧಿ ಕಾರ್ಯಗಳಾಗಿವೆ
Published on

ಬೆಟ್ಟದಪುರ: ತಾಲೂಕಿನ ಜನರ ಬೇಡಿಕೆಯಂತೆ ಕೆಲಸ ಮಾಡಲಾಗಿದ್ದು, ಇದಕ್ಕೆ ಬೇಕಾದ ಅನುದಾನವನ್ನು ಕೂಡ ಮಂಜೂರು ಮಾಡಿಸಿ, ಕೆಲಸಗಳಿಗೆ ಚಾಲನೆ ನೀಡಲಾಗಿದೆ ಎಂದು ಪಶುಸಂಗೋಪನಾ ಮತ್ತು ರೇಷ್ಮೆ ಖಾತೆ ಸಚಿವ ಕೆ.ವೆಂಕಟೇಶ್ ಹೇಳಿದರು.

ಪಿರಿಯಾಪಟ್ಟಣ ತಾಲೂಕಿನ ಹಲಗನಹಳ್ಳಿ ಗ್ರಾಮದಲ್ಲಿ ಮಂಗಳವಾರ ಡಾ.ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಅಭಿವೃದ್ಧಿ ಕೆಲಸ ವಿಚಾರದಲ್ಲಿ ಗ್ರಾಮದಲ್ಲಿ ಒಗ್ಗಟ್ಟು ಇರಬೇಕು. ಇದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಯಾವುದೇ ಕಾರಣಕ್ಕೂ ಗ್ರಾಮಸ್ಥರ ಮಧ್ಯೆ ಒಗ್ಗಟ್ಟು ಒಡೆಯುವ ಕೆಲಸವಾಗಬಾರದು. ಹಲಗನಹಳ್ಳಿ ಗ್ರಾಮದಲ್ಲಿ ಹಲವು ಬೇಡಿಕೆಗಳನ್ನು ಜನರು ನನ್ನ ಗಮನಕ್ಕೆ ತಂದಿದ್ದಾರೆ. ಗ್ರಾಮಕ್ಕೆ ಬಹುಬೇಗ ಬಸ್ ನಿಲ್ದಾಣ ಮಂಜೂರು ಮಾಡಿಕೊಡಲಾಗುವುದು. ದೇವಸ್ಥಾನ ಹಾಗೂ ಮಸೀದಿ ಅಭಿವೃದ್ಧಿ ಸಂಬಂಧಪಟ್ಟಂತೆ ಸಾಧ್ಯವಾದಷ್ಟು ಅನುದಾನ ನೀಡಲಾಗುವುದು ಎಂದರು.

ವಿವಿಧೆಡೆ ಭೂಮಿ ಪೂಜೆ: ಸಮೀಪದ ಮನುಗನಹಳ್ಳಿ, ನಿಲವಾಡಿ ಗ್ರಾಮದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಭೂಮಿ ಪೂಜೆ, ಸಮೀಪದ ಅಡಗೂರು, ಕೋಮಲಾಪುರ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಆಶ್ರಯ ಸಮಿತಿ ಮತ್ತು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ನಿತೀನ್ ವೆಂಕಟೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಹಮತ ಜನ್ ಬಾಬು, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಹೊಲದಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ವೀಣಾ ವೆಂಕಟೇಶ್, ಸದಸ್ಯ ಸುಯಲ್ ಪಾಷಾ, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಲೋಕೇಶ್, ಮೈಮುಲ್ ನಿರ್ದೇಶಕ ಪ್ರಕಾಶ್, ಜಾಮಿಯಾ ಮಸೀದಿ ಅಧ್ಯಕ್ಷ ನವೀಜ್ ಖಂಡಿತ, ಶಂಕರೇಗೌಡ, ಶೇಖರ್, ವೆಂಕಟೇಶ್, ನಸೀರ್ ಅಹಮದ್, ಅನ್ವರ್ ಪಾಷಾ, ನಾಗರಾಜೇಗೌಡ, ಜಯಣ್ಣ, ಅಣ್ಣಯ್ಯ, ಮರೀಗೌಡ, ತಹಸೀಲ್ದಾರ್ ಜೆ ನಿಸರ್ಗ ಪ್ರಿಯಾ, ತಾಲೂಕು ಪಂಚಾಯಿತಿ ಇಒ ಸುನೀಲ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net