

ಶೃಂಗೇರಿ: ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡರು ಏಳು ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೇ ಕೇಂದ್ರ ಸರ್ಕಾರದ ಜಲಜೀವನ್ ಯೋಜನೆಯ ಶಂಕುಸ್ಥಾಪನೆ ಮಾಡುವುದರಲ್ಲಿ ನಿರತರಾಗಿದ್ದು, ಕ್ಷೇತ್ರದಲ್ಲಿ ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ ಎಂದು ಬಿಜೆಪಿ ಮಂಡಲದ ಅಧ್ಯಕ್ಷ ತಲಗಾರು ಉಮೇಶ್ ಆರೋಪಿಸಿದರು.
ಪ್ರವಾಸಿ ಮಂದಿರದಲ್ಲಿ ಬಿಜೆಪಿ ಮಂಡಲದ ವತಿಯಿಂದ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತಾಲೂಕಿನಲ್ಲಿ ಶಾಸಕರು ಜಲಜೀವನ್ ಯೋಜನೆ ಕಾಮಗಾರಿ ಉದ್ಘಾಟಿಸಿದ ಕಡೆ ನಲ್ಲಿಗಳಲ್ಲಿ ನೀರು ಬರುತ್ತಿಲ್ಲ. ಕಾಡುಪ್ರಾಣಿಗಳ ಉಪಟಳದಿಂದ ರೈತರು ಹಾಗೂ ಜನಸಾಮಾನ್ಯರು ಜೀವಭಯದಲ್ಲಿ ಬದುಕುತ್ತಿದ್ದಾರೆ. ಪ್ರಾಣಿಗಳ ಉಪಟಳದಿಂದ ಸಾವು ಸಂಭವಿಸಿದವರಿಗೆ ಸರಿಯಾದ ಪರಿಹಾರ ನೀಡಿಲ್ಲ ಎಂದು ದೂರಿದರು.
ತಾಲೂಕಿನ ರಸ್ತೆಗಳ ಸ್ಥಿತಿ ಆಯೋಮಯವಾಗಿದೆ.ಜನರ ಸ್ಪಂದನೆಗಳಿಗೆ ಪರಿಹಾರ ನೀಡ ಶಾಸಕರು ಕೇವಲ ಪತ್ರಿಕಾ ಹೇಳಿಕೆಗೆ ಸೀಮಿತವಾಗಿದ್ದಾರೆ. ತಾಲೂಕಿನ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ 17 ರಂದು ಬೆಳಗ್ಗೆ 10.30ಕ್ಕೆ ಕುವೆಂಪು ಬಸ್‌ನಿಲ್ದಾಣದಿಂದ ತಾಲೂಕು ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ತಾಲೂಕು ಕಚೇರಿ ಎದುರು ಪ್ರತಿಭಟನಾ ಸಭೆ ನಡೆಸಲಾಗುವುದು. ಮಲೆನಾಡಿನ ಜಲ್ವಂತ ಸಮಸ್ಯೆಗಳ ಕುರಿತು ಧ್ವನಿ ಎತ್ತ ಬೇಕಾದ ಶಾಸಕರು ಕೇವಲ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭಕ್ಕೆ ಸೀಮಿತವಾಗಿದ್ದಾರೆ ಎಂದು ದೂರಿದರು.
ಗೋಷ್ಠಿಯಲ್ಲಿ ಪಪಂ ಅಧ್ಯಕ್ಷೆ ಎಚ್.ಎಸ್.ವೇಣುಗೋಪಾಲ್, ಸದಸ್ಯ ಹರೀಶ್.ವಿ.ಶೆಟ್ಟಿ ಇದ್ದರು.