ನೇರಸಂವಾದಕ್ಕೆ ದೇವಿಪ್ರಸಾದ್ ಶೆಟ್ಟಿ ಆಯ್ಕೆ

Untitled-1 copy
Published on

ಪಡುಬಿದ್ರಿ: ಗ್ರಾಮೀಣಾಭಿವೃದ್ಧಿಯಲ್ಲಿ ಮಾಡಿರುವ ಸಾಧನೆ ಮುಂದೆ ಮಾಡಬಹುದಾದ ಯೋಜನೆಗಳ ಬಗ್ಗೆ ಅ.22ರಂದು ನಡೆಯುವ ನೇರ ಸಂವಾದದಲ್ಲಿ ಪಾಲ್ಗೊಳ್ಳಲು ಬೆಳಪು ಗ್ರಾಪಂ ಮಾಜಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಕಾರ್ಯದರ್ಶಿ ಸುನೀಲ್ ಕುಮಾರ್ ಹಾಗೂ ಜಂಟಿ ಕಾರ್ಯದರ್ಶಿ ಕುಶವಂತ ಸೇಠಿಯವರೊಂದಿಗೆ ಸಂವಾದ ನಡೆಯಲಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮೂಲಕ ಕೈಗೊಂಡಿರುವ ಯೋಜನೆಗಳು, ಪಂಚಾಯತ್‌ರಾಜ್ ವ್ಯವಸ್ಥೆಯನ್ನು ಇನ್ನಷ್ಟು ಗಟ್ಟಿಗೊಳಿಸಲು ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ವಿಶೇಷ ಸಾಧನೆ ಮಾಡಿರುವ ದೇಶದ ಆಯ್ದ 4 ಪಂಚಾಯಿತಿ ಅಧ್ಯಕ್ಷರನ್ನು ಆಯ್ಕೆ ಮಾಡಿದ್ದು, ಕರ್ನಾಟಕದಿಂದ ಏಕೈಕ ಪ್ರತಿನಿಧಿಯಾಗಿ ಶೆಟ್ಟಿ ಆಯ್ಕೆಯಾಗಿದ್ದಾರೆ.

ಮೈಸೂರು ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಂಸ್ಥೆ ನಿರ್ದೇಶಕ ಡಾ.ಗಣೇಶ್ ಅವರು ದೇವಿಪ್ರಸಾದ್ ಹೆಸರನ್ನು ಕರ್ನಾಟಕದಿಂದ ಶಿಫಾರಸುಗೊಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net