ಬಾಲಕಿ ಮೇಲೆ ಬೀದಿ ನಾಯಿಗಳ ದಾಳಿ

devnalli dogs bite
Published on

ವಿಜಯವಾಣಿ ಸುದ್ದಿಜಾಲ ದೇವನಹಳ್ಳಿ
ಪಟ್ಟಣದ 17ನೇ ವಾರ್ಡ್ ವ್ಯಾಪ್ತಿಯ ದಾಸರಬೀದಿಯಲ್ಲಿ 10 ವರ್ಷದ ಬಾಲಕಿ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಗಂಭೀರ ಗಾಯಗೊಳಿಸಿವೆ.
ವಾರ್ಡ್ ನಿವಾಸಿ ಆಶಾ ಎಂಬುವರ ಪುತ್ರಿ ಲಾವಣ್ಯಾ ಬೆಳಗ್ಗೆ ಅಂಗಡಿಗೆ ತೆರಳಿ ವಾಪಸ್ ಬರುತ್ತಿದ್ದಾಗ ನಾಲ್ಕೈದು ನಾಯಿಗಳು ದಾಳಿ ನಡೆಸಿವೆ. ಈ ವೇಳೆ ಭಯಭೀತಳಾದ ಬಾಲಕಿ ಕಿರುಚಾಡಿದ್ದಾಳೆ. ಇದನ್ನು ಗಮನಿಸಿದ ಸ್ಥಳೀಯರು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರಾಣಿ ದಯಾ ಸಂಘದ ಅಡ್ಡಿ: ವಾರ್ಡ್‌ನಲ್ಲಿ ಬೀದಿನಾಯಿಗಳ ಸಂಖ್ಯೆ ಮಿತಿಮೀರಿದೆ, ದ್ವಿಚಕ್ರ ವಾಹನ ಸವಾರರನ್ನು ಅಟ್ಟಿಸಿಕೊಂಡು ಹೋಗುವುದು, ಮಕ್ಕಳ ಮೇಲೆ ದಾಳಿ ಮಾಡುವುದು ಸಾಮಾನ್ಯವಾಗಿದೆ. ಈ ಬಗ್ಗೆ ಪುರಸಭೆಗೆ ದೂರು ನೀಡಿದರೆ ಪ್ರಾಣಿ ದಯಾ ಸಂಘದವರು ಅಡ್ಡಿಪಡಿಸುತ್ತಾರೆ ಎಂಬ ನೆಪ ಹೇಳಿ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ವಾರ್ಡ್ ಸದಸ್ಯ ಜಿ.ಸುರೇಶ್ ಪ್ರತಿಕ್ರಿಯಿಸಿದ್ದಾರೆ.
ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು: ಬಾಲಕಿ ಮೇಲೆ ನಾಯಿಗಳು ದಾಳಿ ನಡೆಸಿರುವ ಬಗ್ಗೆ ದೂರು ಬಂದಿದ್ದು, ಈ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು. ಅವರ ನಿರ್ದೇಶನದಂತೆ ಕ್ರಮಕೈಗೊಳ್ಳಲಾಗುವುದು ಎಂದು ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಶ್ರೀದೇವಿ ಪ್ರತಿಕ್ರಿಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net