ರೈತರ ಪ್ರಗತಿಗೆ ವಿಎಸ್ಸೆಸ್ಸೆನ್ ಕೊಡುಗೆ ಅಪಾರ

devnalli vssn
Published on

ದೇವನಹಳ್ಳಿ: ರೈತರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಹಕಾರ ಸಂಘಗಳ ಕೊಡುಗೆ ಅಪಾರ ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.
ಪಟ್ಟಣದ ಗೃಹಕಚೇರಿಯಲ್ಲಿ ತಾಲೂಕಿನ ಮಂಡಿಬೆಲೆ ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾದ ನಿರ್ದೇಶಕರನ್ನು ಸನ್ಮಾನಿಸಿ ಮಾತನಾಡಿದರು. ಮಂಡಿಬೆಲೆ ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ 9 ಮಂದಿ ಜೆಡಿಎಸ್ ಬೆಂಬಲಿತ ನಿರ್ದೇಶಕರು ಆಯ್ಕೆಯಾಗಿದ್ದಾರೆ. 30 ವರ್ಷಗಳಿಂದ ಜೆಡಿಎಸ್ ತೆಕ್ಕೆಯಲ್ಲೇ ಸಂಘ ಕಾರ್ಯನಿರ್ವಹಿಸುತ್ತಿದೆ ಎಂದರು.
ತಾಲೂಕು ಸೊಸೈಟಿ ಮಾಜಿ ಅಧ್ಯಕ್ಷ ಗಂಗಾಧರ್ ಮಾತನಾಡಿ, ಮಂಡಿಬೆಲೆ ಸಹಕಾರ ಸಂಘದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಎಲ್ಲರೂ ಒಮ್ಮತದಿಂದ ಸಂಘದ ಅಭಿವೃದ್ಧಿಗೆ ಚುನಾವಣೆ ಇಲ್ಲದೆ ಅವಿರೋಧವಾಗಿ ನಿರ್ದೇಶಕರನ್ನು ಆಯ್ಕೆ ಮಾಡಿದ್ದಾರೆ ಎಂದರು.
ನಿರ್ದೇಶಕರಾದ ಶ್ರೀನಾಥ್, ತಿಮ್ಮರಾಯಪ್ಪ, ಗೀತಾ, ಮುಖಂಡರಾದ ಬೈರೇಗೌಡ, ಶೈಲಜಾ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net