ದೇಗುಲಗಳಲ್ಲಿ ಶ್ರದ್ಧಾಭಕ್ತಿಯಿಂದ ಶಿವರಾತ್ರಿ ಆಚರಣೆ

ಫೋಟೋ ಶೀರ್ಷಿಕೆ 08 ಸಿಆರ್_ಪಿ-1ಎ
Published on

ಚನ್ನರಾಯಪಟ್ಟಣ: ಪಟ್ಟಣದಾದ್ಯಂತ ವಿವಿಧ ದೇವಸ್ಥಾನಗಳಲ್ಲಿ ಮಹಾಶಿವರಾತ್ರಿ ಹಬ್ಬವನ್ನು ಶುಕ್ರವಾರ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ನಗರದ ಶಿವ ದೇವಸ್ಥಾನಗಳಿಗೆ ಬೆಳಗ್ಗೆಯಿಂದಲೇ ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.


ಮುಂಜಾನೆಯಿಂದಲೇ ದೇವರಿಗೆ ವಿಶೇಷ ಪೂಜೆಗಳು ಜರುಗಿದವು. ಕೋಟೆ ಶ್ರೀಚಂದ್ರಮೌಳೇಶ್ವರ ದೇವಸ್ಥಾನ, ಗದ್ದೆ ರಾಮೇಶ್ವರ ದೇವಸ್ಥಾನ, ಕಾಡುಬಸವೇಶ್ವರ ದೇವಸ್ಥಾನ, ಶ್ರೀಸಂಕಷ್ಟಹರ ಗಣಪತಿ ದೇವಸ್ಥಾನಗಳಲ್ಲಿ ಭಕ್ತರು ಹೆಚ್ಚಾಗಿದ್ದರು. ಮಧ್ಯಾಹ್ನದವರೆಗೂ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.


ಕುಂಬಾರರ ಬೀದಿಯ ಶ್ರೀವೀರಭದ್ರೇಶ್ವರ ದೇವರ ಸನ್ನಿಧಿಯಲ್ಲಿ ರುದ್ರಾಭಿಷೇಕ, ಮಹಾಪೂಜೆ, ಹೋಮ, ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ಕೋಟೆ ಶ್ರೀಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ವಿವಿಧ ಭಜನ ಮಂಡಳಿಯವರಿಂದ ಜಾಗರಣೆ ಕಾರ್ಯಕ್ರಮ ನಡೆಸಿಕೊಟ್ಟರು. ಶುಕ್ರವಾರ ಸೂರ್ಯಾಸ್ತದಿಂದ ಶನಿವಾರ ಸೂರ್ಯೋದಯದವರೆಗೆ ಭಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.


ಗದ್ದೆ ರಾಮೇಶ್ವರ ದೇವಸ್ಥಾನ ಸಹಿತ ಪಟ್ಟಣದ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆದವು. ವಿವಿಧ ದೇಗುಲಗಳಲ್ಲಿ ಭಕ್ತರಿಗೆ ವಿಶೇಷ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಭಜನೆ, ಶಿವ ಸ್ತೋತ್ರ ನಡೆಯಿತು. ಮನೆಗಳಲ್ಲಿಯೂ ಆಚರಣೆ ಬಿರುಸಾಗಿತ್ತು. ಭಜನೆ, ಶಿವನಾಮ ಜಪದ ಮೂಲಕ ಶಿವರಾತ್ರಿ ಆಚರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net