ಮ.ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದಾರೆ ಭಕ್ತರು

11 HANUR 2
ನರಸೀಪುರದ ಮಾವಿನಹಳ್ಳಿಯ ಗ್ರಾಮಸ್ಥರು ಮಲೆಮಹದೇಶ್ವರ ಬೆಟ್ಟಕ್ಕೆ ಹನೂರಿನಲ್ಲಿ ಬುಧವಾರ ಕಾಲ್ನಡಿಗೆಯಲ್ಲಿ ತೆರಳುತ್ತಿರುವುದು.
Published on

ಹನೂರು: ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟಕ್ಕೆ ಕಳೆದ ಎರಡು ದಿನಗಳಿಂದ ಭಕ್ತರು ಕಾಲ್ನಡಿಗೆಯ ಮೂಲಕ ತೆರಳುತ್ತಿದ್ದಾರೆ.

ಮ.ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಅ.14 ರಂದು ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ನಡೆಯಲಿದ್ದು, ಪ್ರತಿ ವರ್ಷ ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ಚನ್ನಪಟ್ಟಣ, ಚಾ.ನಗರ, ಮದ್ದೂರು, ಮಳವಳ್ಳಿ ಹಾಗೂ ನಂಜನಗೂಡು ಹಾಗೂ ಇನ್ನಿತರ ಕಡೆಗಳಿಂದ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಕಾಲ್ನಡಿಗೆಯ ಮೂಲಕವು ಹೆಚ್ಚಿನ ಭಕ್ತರು ಆಗಮಿಸುತ್ತಾರೆ. ಈ ದಿಸೆಯಲ್ಲಿ ಕಳೆದ 2 ದಿನಗಳಿಂದ ಮೈಸೂರು, ನರಸೀಪುರ, ಮಳವಳ್ಳಿ ಹಾಗೂ ಚಾ.ನಗರದಿಂದ ಹೆಚ್ಚಿನ ಭಕ್ತರು ಹನೂರು ಮಾರ್ಗವಾಗಿ ಕಾಲ್ನಡಿಗೆಯ ಮೂಲಕ ತೆರಳುತ್ತಿರುವ ದೃಶ್ಯ ಇಲ್ಲಿ ಸಾಮಾನ್ಯವಾಗಿದೆ.

ಕಾಲ್ನಡಿಗೆಯಲ್ಲಿ ತೆರಳುತ್ತಿರುವ ಭಕ್ತರು ಅದರಲ್ಲೂ ಮಾದಪ್ಪನ ದೇವರ ಗುಡ್ಡರು ಕಂಸಾಳೆ ಬಾರಿಸುತ್ತಾ ಮಹದೇಶ್ವರರ ಹಾಡನ್ನು ಹಾಡುತ್ತಾ ಧೈವಭಕ್ತಿಯಿಂದ ಹೆಜ್ಜೆ ಹಾಕುತ್ತಿದ್ದರೆ ಮಹಿಳೆಯರು, ಮಕ್ಕಳು ಹಾಗೂ ಯುವಕರು ಮಾದಪ್ಪನನಿಗೆ ಜೈಕಾರ ಮೊಳಗಿಸುತ್ತಾ ಅಲ್ಲಲ್ಲಿ ಮರದ ನೆರಳಿನಲ್ಲಿ ವಿಶ್ರಾಂತಿ ಪಡೆದು ಸಹಭೋಜನ ಸವಿದು ತೆರಳುತ್ತಿದ್ದಾರೆ. ತಾಳುಬೆಟ್ಟದಲ್ಲಿ ವಾಸ್ತವ್ಯ ಹೂಡಿ ಮ.ಬೆಟ್ಟಕ್ಕೆ ಭೇಟಿ ನೀಡುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net