ವಿವಿಧ ದೇಗುಲಗಳಲ್ಲಿ ಪೂಜೆ ಸಲ್ಲಿಸಿದ ಭಕ್ತರು

4-kollegal-5
filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 2;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: weather?null, icon:null, weatherInfo:100;temperature: 36;
Published on

ಕೊಳ್ಳೇಗಾಲ: ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ತಾಲೂಕಿನ ಶ್ರೀಕ್ಷೇತ್ರ ಕುರುಬನಕಟ್ಟೆ, ಮರಡಿಗುಡ್ಡ ಶ್ರೀಮಹದೇಶ್ವರ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳಿಗೆ ಸಾವಿರಾರು ಭಕ್ತರು ಆಗಮಿಸಿ ಪೂಜೆ ಸಲ್ಲಿಸಿದರು.


ಮರಡಿಗುಡ್ಡದ ಶ್ರೀಮಹದೇಶ್ವರನ ದರ್ಶನಕ್ಕೆ ಬೆಳಗ್ಗೆಯಿಂದಲೇ ಭಕ್ತರ ದಂಡು ಹರಿದು ಬಂದಿತು. ಶ್ರೀಕ್ಷೇತ್ರ ಕುರುಬನಕಟ್ಟೆಗೆ ಜಿಲ್ಲೆಯ ನಾನಾ ಕಡೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಭಕ್ತಿ ಭಾವದಿಂದ ಮಾದಪ್ಪನಿಗೆ ಧೂಪ, ಕರ್ಪೂರ ಹಚ್ಚಿದರು. ತಡೆ ಒಡೆಸಿಕೊಳ್ಳಲು ಭಕ್ತರು ಮುಗಿಬಿದ್ದರು. ಸರತಿ ಸಾಲಿನಲ್ಲಿ ನಿಂತು ಹೂ, ಹಣ್ಣು, ಕಾಯಿ ಪೂಜೆ ಸಮರ್ಪಿಸಿದರು.


ಶಿವನಸಮುದ್ರದ ಸೋಮೇಶ್ವರ ದೇವಾಲಯಕ್ಕೆ ಬೆಂಗಳೂರು, ಮೈಸೂರು ಸೇರಿದಂತೆ ಇನ್ನಿತರ ಕಡೆಗಳಿಂದ ಭಕ್ತರು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.


ಪಟ್ಟಣದ ಶ್ರೀವರಸಿದ್ದಿ ವಿನಾಯಕ ದೇವಾಲಯ, ಶ್ರೀವೀರಾಂಜನೇಯ ದೇವಾಲಯ, ಶ್ರೀಲಕ್ಷ್ಮೀ ನಾರಾಯಣಸ್ವಾಮಿ ದೇವಾಲಯ, ಶ್ರೀಮರಳೇಶ್ವರ ದೇವಾಲಯ ಇನ್ನಿತರ ದೇವಸ್ಥಾನಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿದ್ದರು. ಪ್ರತಿ ದೇವಾಲಯದಲ್ಲೂ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆಯನ್ನು ಸಲ್ಲಿಸಲಾಗಿತ್ತು. ಮರಡಿಗುಡ್ಡದ ಶ್ರೀಮಹದೇಶ್ವರ ದೇವಾಲಯದಲ್ಲಿ ಭಕ್ತರಿಗೆ ಅನ್ನ ಸಂತರ್ಪಣೆ ನೆರವೇರಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net