ಭಕ್ತಿ, ನಿಷ್ಠೆ ಎಲ್ಲರಿಗೂ ಪ್ರೇರಣೆ

ಸಿರವಾರದಲ್ಲಿ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಯಿತು. ನವಲಕಲ್ ಬೃಹನ್ಮಠದ ಅಭಿನವ ಸೋಮನಾಥ ಶಿವಾಚಾರ್ಯರು, ಪಪಂ ಅಧ್ಯಕ್ಷ ವೈ.ಭೂಪನಗೌಡ, ಉಪಾಧ್ಯಕ್ಷೆ ಲಕ್ಷ್ಮೀ ಆದೆಪ್ಪ, ಚುಕ್ಕಿ ಸೂಗಪ್ಪ ಸಾಹುಕಾರ್, ಬ್ರಿಜೇಶ್ ಪಾಟೀಲ್ ಇತರರಿದ್ದರು.
ಸಿರವಾರದಲ್ಲಿ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಯಿತು. ನವಲಕಲ್ ಬೃಹನ್ಮಠದ ಅಭಿನವ ಸೋಮನಾಥ ಶಿವಾಚಾರ್ಯರು, ಪಪಂ ಅಧ್ಯಕ್ಷ ವೈ.ಭೂಪನಗೌಡ, ಉಪಾಧ್ಯಕ್ಷೆ ಲಕ್ಷ್ಮೀ ಆದೆಪ್ಪ, ಚುಕ್ಕಿ ಸೂಗಪ್ಪ ಸಾಹುಕಾರ್, ಬ್ರಿಜೇಶ್ ಪಾಟೀಲ್ ಇತರರಿದ್ದರು.
Published on

ಸಿರವಾರ: ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಅವರ ಭಕ್ತಿ ಪ್ರತಿಯೊಬ್ಬರಿಗೂ ಮಾದರಿ ಎಂದು ನವಲಕಲ್ ಬೃಹನ್ಮಠದ ಅಭಿನವ ಸೋಮನಾಥ ಶಿವಾಚಾರ್ಯರು ಹೇಳಿದರು.

ಪಟ್ಟಣದಲ್ಲಿ ರಡ್ಡಿ ಸಮಾಜದಿಂದ ಶನಿವಾರ ಹಮ್ಮಿಕೊಂಡಿದ್ದ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಅವರು ಶ್ರೀಶೈಲ ಮಲ್ಲಿಕಾರ್ಜುನ ಪರಮಭಕ್ತೆ. ಮಲ್ಲಮ್ಮನ ಭಕ್ತಿ ಮತ್ತು ನಿಷ್ಠೆ ಎಲ್ಲರಿಗೂ ಮಾದರಿ. ಜೀವನದಲ್ಲಿ ಹಲವು ಕಷ್ಟ ಅನುಭವಿಸಿದ ಮಲ್ಲಮ್ಮ ಯುವ ಪೀಳಿಗೆ ಹಾಗೂ ಮಹಿಳೆಯರಿಗೆ ಆದರ್ಶವಾಗಿದ್ದಾರೆ ಎಂದರು.

ಪಪಂ ಅಧ್ಯಕ್ಷ ವೈ.ಭೂಪನಗೌಡ, ಉಪಾಧ್ಯಕ್ಷೆ ಲಕ್ಷ್ಮೀ ಆದೆಪ್ಪ, ಪ್ರಮುಖರಾದ ಚುಕ್ಕಿ ಸೂಗಪ್ಪ ಸಾಹುಕಾರ್, ಜೆ.ದೇವರಾಜಗೌಡ ಪಾಟೀಲ್, ಬ್ರಿಜೇಶ್ ಪಾಟೀಲ್, ಶಿವಶರಣ ಗೌಡ ಲಕ್ಕಂದಿನ್ನಿ, ಟಿ.ಆರ್.ಪಾಟೀಲ್, ಎನ್.ಉದಯ ಕುಮಾರ ಸಾಹುಕಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net