ಶನಿವಾರಸಂತೆಯಲ್ಲಿ ಶ್ರದ್ಧಾಭಕ್ತಿಯ ಆಚರಣೆ

ಶನಿವಾರಸಂತೆಯಲ್ಲಿ ಶ್ರದ್ಧಾಭಕ್ತಿಯ ಆಚರಣೆ
Published on

ಶನಿವಾರಸಂತೆ: ಇಲ್ಲಿನ ಶ್ರೀ ರಾಮಮಂದಿರದಲ್ಲಿ ರಾಮನವಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ರಾಮಮಂದಿರದಲ್ಲಿ ಬೆಳಗ್ಗೆ 8ಗಂಟೆಯಿಂದ ಮಧ್ಯಾಹ್ನ 12ಗಂಟೆವರೆಗೆ ಪೂಜಾ ಕೈಂಕರ್ಯಗಳು ಜರುಗಿದವು.

ಶ್ರೀ ರಾಮಚಂದ್ರ, ಶ್ರೀ ಸೀತಾಲಕ್ಷ್ಮೀ, ಶ್ರೀ ಲಕ್ಷ್ಮಣ, ಶ್ರೀ ಆಂಜನೇಯಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಫಲಪಂಚಾಮೃತ ಅಭಿಷೇಕ, ದೇವರುಗಳಿಗೆ ಅಲಂಕಾರ, ವಿಷ್ಣು ಸಹಸ್ರನಾಮ ವಿವಿಧ ಪೂಜಾ ವಿಧಾನ, ರಾಮತಾರಕ ಹೋಮ, ಪೂರ್ಣಾಹುತಿ, ಮಹಾಮಂಗಳಾರತಿ, ಭಕ್ತರಿಗೆ ತೀರ್ಥ ಪ್ರಸಾದ ವಿನಿಯೋಗ ನೆರವೇರಿಸಲಾಯಿತು.

ಮಧ್ಯಾಹ್ನ ಭಕ್ತರಿಗೆ ಅನ್ನ ಸಂತರ್ಪಣೆ, ಪಾನಕ ವಿತರಿಸಲಾಯಿತು. ಶ್ರೀ ರಾಮನವಮಿ ಪ್ರಯುಕ್ತ ನಡೆದ ವಿಶೇಷ ಪೂಜಾ ಮಹೋತ್ಸವದಲ್ಲಿ ನೂರಾರು ಭಕ್ತರು ಪಾಲ್ಗೊಂಡಿದ್ದರು. ದೇವಸ್ಥಾನದ ಅರ್ಚಕ ಪ್ರಸನ್ನ ಭಟ್ ನೇತೃತ್ವದಲ್ಲಿ ಅರ್ಚಕರು ಪೂಜಾ ಕಾರ್ಯಗಳನ್ನು ನೆರವೇರಿಸಿದರು.

ಸಂಜೆ 4.30 ರಿಂದ ಶ್ರೀ ಸೀತಾಲಕ್ಷ್ಮಣ ಆಂಜನೇಯ ಸಹಿತ ಶ್ರೀರಾಮ ದೇವರ ಉತ್ಸವ ಮೂರ್ತಿಗಳನ್ನು ಅಡ್ಡ ಪಲ್ಲಕ್ಕಿಯಲ್ಲಿ ಕುಳ್ಳಿರಿಸಿ ವಾದ್ಯಗೋಷ್ಠಿಯೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ದೇವಸ್ಥಾನ ಸಮಿತಿ ಪದಾಧಿಕಾರಿಗಳು, ಸದಸ್ಯರು, ಪ್ರಮುಖರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net