ಶ್ರದ್ಧಾ-ಭಕ್ತಿಯ ದಿವ್ಯಾರಾಧನೆ

ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಆಯೋಜಿಸಿದ್ದ ವಿಶೇಷ ಪೂಜಾ ಸಮಯದಲ್ಲಿ ನೆರೆದಿದ್ದ ಭಕ್ತ ಸಮೂಹ.
ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಆಯೋಜಿಸಿದ್ದ ವಿಶೇಷ ಪೂಜಾ ಸಮಯದಲ್ಲಿ ನೆರೆದಿದ್ದ ಭಕ್ತ ಸಮೂಹ.
Published on

ವಿರಾಜಪೇಟೆ: ನಗರದ ಚಿಕ್ಕಪೇಟೆ ಛತ್ರಕೆರೆ ಸಮೀಪದ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 354 ನೇ ದಿವ್ಯಾರಾಧನೆ  ಶ್ರದ್ಧಾ-ಭಕ್ತಿಯಿಂದ ನಡೆಯಿತು.

ದೇಗುಲದ ಪ್ರಧಾನ ಅರ್ಚಕ ಸುಬ್ರಮಣ್ಯ ಭಟ್ ಅವರ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನ ಆರಂಭಗೊಂಡಿತು. ಮುಂಜಾನೆಯೇ ಸ್ವಾಮಿಗಳ ದಿವ್ಯ ಮೂರ್ತಿಗೆ ಕ್ಷೀರಾಭಿಷೇಕ ಸೇರಿದಂತೆ ವಿವಿಧ ಅಭಿಶೇಕಗಳು ನೆರವೇರಿತು. ನಂತರ ವಿವಿಧ ಹೂವುಗಳಿಂದ ಅಲಂಕಾರ ಪೂಜಾ ನಡೆಯಿತು.

ನಗರದ ಮಹಿಳಾ ಸಂಘದ ಭಕ್ತರಿಂದ ಗುರುರಾಯರ ಭಜನೆ ನಡೆಯಿತು. ಬಳಿಕ ಮದ್ಯಾಹ್ನ ಶ್ರೀ ಸ್ವಾಮಿಗೆ ಮಾಹಾ ಮಂಗಳಾರತಿ ಮತ್ತು ಮಹಾಪೂಜೆ ಸಲ್ಲಿಕೆಯಾಯಿತು. ಆಗಮಿಕ ಭಕ್ತರಿಗೆ ಆಡಳಿತ ಮಂಡಳಿ ವತಿಯಿಂದ ಅನ್ನಸಂತರ್ಪಣೆ ಆಯೋಜಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net