

ಉಪ್ಪಿನಬೆಟಗೇರಿ: ಗ್ರಾಮೀಣ ಭಾಗದಲ್ಲಿ ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿಯಾಗಿದೆ ಎಂದು ಗ್ರಾಪಂ ಅಧ್ಯಕ್ಷ ಬಸೀರಅಹ್ಮದ ಮಾಳಗಿಮನಿ ಹೇಳಿದರು.
ಗ್ರಾಮದ ಶ್ರೀ ವಿಠ್ಠಲ ಮಂದಿರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗುರುವಾರ ಅಳವಡಿಸಿದ್ದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಅವರು ಮಾತನಾಡಿದರು. ‘ಸರ್ಕಾರಗಳು ಮಾಡದಂಥ ಬಹುತೇಕ ಕೆಲಸಗಳನ್ನು ಧರ್ಮಸ್ಥಳ ಧರ್ಮಾಧಿಕಾರಿ ಶ್ರೀವೀರೇಂದ್ರ ಹೆಗ್ಗಡೆ ಅವರು ಮಾಡುತ್ತಿದ್ದಾರೆ. ಬಡ ಕುಟುಂಬಕ್ಕೆ ಆರ್ಥಿಕ ಸಹಾಯ, ವೃದ್ಧರಿಗೆ ಮಾಸಿಕ ವೇತನ, ನಿರ್ಗತಿಕರಿಗೆ ಮನೆ ನಿರ್ಮಾಣ, ಉಪ ಜೀವನಕ್ಕೆ ಅಹಾರ ಧಾನ್ಯ ವಿತರಣೆ ಸೇರಿದಂತೆ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಧನ ಸಹಾಯ ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದರು.
ಯೋಜನೆಯ ಜಿಲ್ಲಾ ನಿರ್ದೇಶಕ ಪ್ರದೀಪ ಶೆಟ್ಟಿ ಮಾತನಾಡಿದರು. ತಾಲೂಕು ಯೋಜನಾಧಿಕಾರಿ ಅಶೋಕ ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು. ಒಕ್ಕೂಟದ ಅಧ್ಯಕ್ಷೆ ರೇಣುಕಾ ರಾಯ್ಕರ ಅಧ್ಯಕ್ಷತೆ ವಹಿಸಿದ್ದರು.
ರೇವಣಸಿದ್ದಪ್ಪ ನವಲಗುಂದ, ಬಸಪ್ಪ ಯಮೋಜಿ, ರುದ್ರಪ್ಪ ಪಟ್ಟಣಶೆಟ್ಟಿ, ಮಡಿವಾಳಪ್ಪ ಏಳಲ್ಲಿ, ಫಕೀರಪ್ಪ ಶಿವಳ್ಳಿ, ಪಲ್ಲವಿಶೆಟ್ಟಿ, ಸವಿತಾ ಟಗರಿ, ಜಯಶ್ರೀ ಉಳ್ಳಿಗೇರಿ, ಸವಿತಾ ಅಂಚಿಯವರ, ಇತರರಿದ್ದರು.