ಸಮಾಜಮುಖಿ ಕಾರ್ಯಕ್ಕೆ ಧಗ್ರಾಯೋ ಪೂರಕ

20MDG1 VICHARAGOSHTI
Published on

ಮುಂಡರಗಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಮಾಜಮುಖಿ ಕೆಲಸಗಳನ್ನು ಮಾಡಲಾಗುತ್ತಿದೆ. ಮಹಿಳೆಯರು ಯೋಜನೆಯ ಪ್ರಯೋಜನ ಪಡೆದುಕೊಳ್ಳುವುದರ ಮೂಲಕ ತಮ್ಮ ಅಸ್ತಿತ್ವ ಪಡೆದುಕೊಳ್ಳಬೇಕು ಎಂದು ನಾಡೋಜ ಡಾ. ಅನ್ನದಾನೀಶ್ವರ ಸ್ವಾಮೀಜಿ ಹೇಳಿದರು.

ಪಟ್ಟಣದ ಜಗದ್ಗುರು ಅನ್ನದಾನೀಶ್ವರ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದಡಿ ಆಯೋಜಿಸಿದ್ದ ತಾಲೂಕು ಮಟ್ಟದ ಮಹಿಳಾ ಸಮಾವೇಶ ಮತ್ತು ವಿಚಾರಗೋಷ್ಠಿಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ನಿರ್ದೇಶಕ ಗಣೇಶ ಬಿ. ಮಾತನಾಡಿ, ಮಹಿಳೆಯರು ಆರ್ಥಿಕ ಅಭಿವೃದ್ಧಿ ಹೊಂದುವುದರ ಜತೆಗೆ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಸುಕ್ಷೇತ್ರ ಶಿಂಗಟಾಲೂರು ವೀರಭದ್ರೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿ ಅಧ್ಯಕ್ಷ ಕರಬಸಪ್ಪ ಹಂಚಿನಾಳ, ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಮಾತನಾಡಿದರು. ಜಿಲ್ಲಾ ಜನ ಜಾಗೃತಿ ಸಮಿತಿ ಸದಸ್ಯರಾದ ಎ.ಕೆ. ಮುಲ್ಲಾನವರ, ನಾಗೇಶ ಹುಬ್ಬಳ್ಳಿ, ಗವಿಸಿದ್ದಯ್ಯ ಹಳ್ಳಿಕೇರಿಮಠ, ಪುರಸಭೆ ಸದಸ್ಯೆ ಕವಿತಾ ಉಳ್ಳಾಗಡ್ಡಿ, ರಿಹಾನಬೇಗಂ ಕೆಲೂರು, ಜ್ಯೋತಿ ಕುರಿಯವರ, ಎಸ್.ಎಂ. ಹಂಚಿನಾಳ, ಡಾ.ವನಜಾಕ್ಷಿ ಭರಮನಗೌಡ್ರ, ಪವಿತ್ರಾ ಕಲ್ಲಕುಟಗರ, ರವಿ ಜೆ, ನೇತ್ರಾ, ಭೀಮಾ ನಾಯಕ, ಇತರರಿದ್ದರು. ತಾಲೂಕು ಯೋಜನಾಧಿಕಾರಿ ವಿಶಾಲಾ ಮಲ್ಲಾಪೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಾಂತೇಶ ಎಂ. ನಿರೂಪಿಸಿದರು. ಸಮನ್ವಯಾಧಿಕಾರಿ ಮಂಜುಳಾ ಜೈನ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net