ಮಂಜುನಾಥ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ

Untitled design(10)
ಕುಕನೂರು ತಾಲೂಕಿನ ದ್ಯಾಂಪೂರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಮಂಜುನಾಥ ಸ್ವಾಮಿ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಬಸವಲಿಂಗೇಶ್ವರ ಶಿವಾಚಾರ್ಯರ ಸ್ವಾಮೀಜಿ, ಮಹಾದೇವ ಸ್ವಾಮೀಜಿ, ಪ್ರಮುಖರಾದ ವೀರಯ್ಯ ಸಸಿಮಠ, ಶಿವಲಿಂಗಯ್ಯ ಶಿರೂರು ಮಠ, ನಾಗಯ್ಯ ತಳಕಲ್, ರಾಮಣ್ಣ ಜಗತ್ತಾಪ, ಮುದಿಯಪ್ಪ ಹಾಳಕೇರಿ, ಬಸವರಾಜ್ ಬಿಡ್ನಾಳ, ನಾಗರಾಜ ಅಬಿಗೇರಿ, ಭೀಮರೆಡ್ಡಿ ಇದ್ದರು.
Published on

ಕುಕನೂರು: ತಾಲೂಕಿನ ದ್ಯಾಂಪೂರು ಗ್ರಾಮದಲ್ಲಿ ಮಂಜುನಾಥ ಸ್ವಾಮಿ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ವಿಜೃಂಭಣೆಯಿಂದ ಸೋಮವಾರ ಜರುಗಿತು.

ಬಸವಲಿಂಗೇಶ್ವರ ಶಿವಾಚಾರ್ಯರ ಸ್ವಾಮೀಜಿ ಸಾನ್ನಿಧ್ಯ

ಬೆಳಗ್ಗೆ ದೇವಸ್ಥಾನದಲ್ಲಿ ಧಾರ್ಮಿಕ ಪೂಜಾ ಕೈಂಕಾರ್ಯಗಳು ಯಲಬುರ್ಗಾದ ಶ್ರೀಧರ ಮುರುಡಿ ಹಿರೇಮಠದ ಬಸವಲಿಂಗೇಶ್ವರ ಶಿವಾಚಾರ್ಯರ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ನಡೆದವು. ಪೂಜೆ, ಅಭಿಷೇಕದೊಂದಿಗೆ ಮಂಜುನಾಥಸ್ವಾಮಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಯಿತು. ಕುಕನೂರಿನ ಶ್ರೀಅನ್ನದಾನೀಶ್ವರ ಶಾಖಾ ಮಠದ ಮಹಾದೇವ ಸ್ವಾಮೀಜಿ ಆಶೀರ್ವಚನ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net