ಧಾರವಾಡ ಕೇಂದ್ರ ಕಾರಾಗೃಹಕ್ಕೆ ದರ್ಶನ್ ಸಹಚರ ಧನರಾಜ್

29 Dwd 2
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಽತ ನಟ ದರ್ಶನ್ ಸಹಚರ ಧನರಾಜ್‌ನನ್ನು ಪೊಲೀಸ್ ಬಂದೋಬಸ್ತ್ನಲ್ಲಿ ಧಾರವಾಡ ಕೇಂದ್ರ ಕಾರಾಗೃಹಕ್ಕೆ ಗುರುವಾರ ಸ್ಥಳಾಂತರ ಮಾಡಲಾಯಿತು.
ನಟ ದರ್ಶನ್‌ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಿದ ಹಿನ್ನೆಲೆಯಲ್ಲಿ ದರ್ಶನ್ ಸೇರಿ ಆತನ ಸಹಚರರನ್ನು ರಾಜ್ಯದ ವಿವಿಧ ಜೈಲುಗಳಿಗೆ ಸ್ಥಳಾಂತರಕ್ಕೆ ನ್ಯಾಯಾಲಯ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನ ಅಽಕಾರಿ ಮತ್ತು ಸಿಬ್ಬಂದಿ ಬಂದೋಬಸ್ತ್ನಲ್ಲಿ ಮಧ್ಯಾಹ್ನ 12.45ಕ್ಕೆ ಧಾರವಾಡಕ್ಕೆ ಕರೆತಂದರು.
ಇಲ್ಲಿನ ಕಾರಾಗೃಹಕ್ಕೆ ಆಗಮಿಸಿದಾಗ ಧನರಾಜ್ ಹಾಗೂ ಆತ ತಂದಿದ್ದ ಬಟ್ಟೆ ಚೀಲವನ್ನು ಮೆಟಲ್ ಡಿಕೆಕ್ಟರ್‌ನಿಂದ ತಪಾಸಣೆ ಮಾಡಿ ಒಳಗೆ ಕಳುಹಿಸಲಾಯಿತು. ಜೈಲೊಳಗಿರುವ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿ ಕೈದಿ ಸಂಖ್ಯೆ 8629 ನೀಡಿ ದಾಖಲು ಮಾಡಿಕೊಳ್ಳಲಾಯಿತು. ಮಧ್ಯಾಹ್ನದ ಊಟಕ್ಕೆ ಚಪಾತಿ, ಪಲ್ಯ, ಅನ್ನ, ಸಾಂಬಾರ್ ನೀಡಲಾಯಿತು.
ಹುಬ್ಬಳ್ಳಿ- ಧಾರವಾಡ ಡಿಸಿಪಿ ಮಹಾನಿಂಗ ನಂದಗಾವಿ, ಎಸಿಪಿ ಪ್ರಶಾಂತ ಸಿದ್ದನಗೌಡರ, ಉಪನಗರ ಠಾಣೆ ಇನ್‌ಸ್ಪೆಕ್ಟರ್ ದಯಾನಂದ ಶೇಗುಣಸಿ ನೇತೃತ್ವದಲ್ಲಿ ಪೊಲೀಸರು ಭದ್ರತೆ ಕೈಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net