

ಕುಂದಾಪುರ: ಯೂತ್ ಯೋಗ ಅಸೋಸಿಯೇಷನ್ ಮತ್ತು ವರ್ಲ್ಡ್ ಯೂತ್ ಯೋಗ ಫೆಡರೇಶನ್ ಹಾಗೂ ವರ್ಷಿಣಿ ಯೋಗ ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ರೀಡಾ ಟ್ರಸ್ಟ್ ರಿಜಿಸ್ಟರ್ಡ್ ಶಿವಮೊಗ್ಗ ಕರ್ನಾಟಕ ಸಹಭಾಗಿತ್ವದಲ್ಲಿ ಥಾಯ್ಲೆಂಡ್ ದೇಶದ ಪಟ್ಟಾಯದಲ್ಲಿ ಡಿ.9ರಂದು ನಡೆದ 6ನೇ ವರ್ಷದ ಅಂತಾರಾಷ್ಟ್ರೀಯ ಯೋಗ ಚಾಂಪಿಯನ್‌ಷಿಪ್ ಸ್ಪರ್ಧೆಯ 11ರಿಂದ 15 ವರ್ಷದ ವಯಸ್ಸಿನ ವಿಭಾಗದಲ್ಲಿ ಪ್ರತಿನಿಧಿಸಿದ ಧನ್ವಿ ಪೂಜಾರಿ ಮರವಂತೆ ಅವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.