ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಸೇವೆ ಅನನ್ಯ

18BTP02
ಬೆಟ್ಟದಪುರದಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಾಗಾರವನ್ನು ಶ್ರೀ ಸದಾಶಿವ ಸ್ವಾಮೀಜಿ ಉದ್ಘಾಟಿಸಿದರು. ಲೀಲಾವತಿ, ಸಂತೋಷ್ ಕುಮಾರ್, ಮಮಿತಾ, ವಿನಯಕ್ ಇದ್ದರು.
Published on

ಬೆಟ್ಟದಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಸೇವೆ ಅನನ್ಯ ಎಂದು ಕೊಡ್ಲಿಪೇಟೆಯ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಶ್ಲಾಘಿಸಿದರು.

ಇಲ್ಲಿನ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ತಾಲೂಕು ಮಟ್ಟದ ಒಕ್ಕೂಟ ಅಧ್ಯಕ್ಷರ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಡಾ.ವೀರೇಂದ್ರ ಹೆಗ್ಗಡೆ ಅವರು ಜನಸೇವಾ ಕಾರ್ಯಗಳಿಗೆ ಹೆಚ್ಚು ಒತ್ತು ಕೊಟ್ಟು ಕೆಲಸ ಮಾಡುತ್ತಿದ್ದಾರೆ. ಸಂಸ್ಥೆಯ ಕಾರ್ಯಕ್ರಮಗಳನ್ನು ಗ್ರಾಮ ಮಟ್ಟದಲ್ಲಿ ಅನುಷ್ಠಾನವಾಗಬೇಕಾದರೆ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದರು.

ಉತ್ತಮವಾಗಿ ಕಾರ್ಯನಿರ್ವಹಿಸಿ ಸಾಧನೆ ಮಾಡಿದ ಒಕ್ಕೂಟದ ಅಧ್ಯಕ್ಷರನ್ನು ಸನ್ಮಾನಿಸಲಾಯಿತು. ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ, ವಲಯ ಮಟ್ಟದ ಯೋಜನಾಧಿಕಾರಿ ಸಂತೋಷ್ ಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net