ಫೆ.೨೧ ರಂದು ಧರಣಿ ಸತ್ಯಾಗ್ರಹ

N.U.Naachappa
Published on

ಮಡಿಕೇರಿ: ಕೊಡವ ಭಾಷೆಯನ್ನು ಸಂವಿಧಾನದ ೮ನೇ ಶೆಡ್ಯೂಲ್‌ಗೆ ಸೇರಿಸಬೇಕು ಎಂದು ಒತ್ತಾಯಿಸಿ ವಿಶ್ವ ರಾಷ್ಟ್ರ ಸಂಸ್ಥೆಯ ಅಂತರರಾಷ್ಟ್ರೀಯ ಮಾತೃಭಾಷಾ ದಿನವಾದ ಫೆ.೨೧ ರಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೆಳಗ್ಗೆ ೧೦.೩೦ ಗಂಟೆಗೆ ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುವುದು. ಜಲ ಮಾತೆ ಕಾವೇರಿ ಮತ್ತು ಪ್ರಕೃತಿ ಮಾತೆಯಿಂದ ಕೊಡವ ಜನಜೀವನವನ್ನು ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಂವಿಧಾನದ ೮ನೇ ಶೆಡ್ಯೂಲ್‌ಗೆ ಕೊಡವ ಭಾಷೆಯನ್ನು ಸೇರಿಸಬೇಕು. ಸಂವಿಧಾನದ ೩೪೭, ೩೫೦, ೩೫೦ಎ, ೩೫೦ಬಿ ಅನುಚ್ಛೇದಗಳು ಆದಿಮಂಸಜಾಯ ಕೊಡವ ಜನಾಂಗದ ಮಾತೃಭಾಷೆಯಾದ ಕೊಡವ ತಕ್ ನಂತಹ ಸೂಕ್ಷ್ಮ ಭಾಷೆಯ ಪ್ರಚಾರ, ರಕ್ಷಣೆ, ಸಂರಕ್ಷಣೆಗೆ ಸಂಬಂಧಿಸಿದಂತೆ ಅನ್ವಯವಾಗುವಂತೆ ಮಾಡಬೇಕು. ಕೊಂಕಣಿ ಭಾಷೆಗೆ ಸಮಾನವಾಗಿ ಕೊಡವ ತಕ್ ಅನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಮತ್ತು ಕೊಡಗಿನ ಆಡಳಿತ ಭಾಷೆಯನ್ನಾಗಿ ಮಾಡಬೇಕು. ಯುನೆಸ್ಕೋದ ಇಂಟಾಜಿಬಲ್ ಕಲ್ಚರಲ್ ಹೆರಿಟೇಜ್ ಪಟ್ಟಿಯಲ್ಲಿ ಕೊಡವ ಭಾಷೆ, ಸಂಸ್ಕೃತಿಯನ್ನು ಸೇರಿಸಬೇಕು. ಕೊಡವ ಜನಾಂಗಕ್ಕೆ ಎಸ್‌ಟಿ ಟ್ಯಾಗ್‌ನೊಂದಿಗೆ ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳನ್ನು ನೀಡಬೇಕು ಎಂದು ಧರಣಿ ಸಂದರ್ಭ ಒತ್ತಾಯಿಸುವುದಾಗಿ ನಾಚಪ್ಪ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net