

ಎರಡು ಪೂರ್ವ ಸಿದ್ಧತಾ ಪರೀಕ್ಷೆಯನ್ನು ಬರೆದು ಅನುತ್ತೀರ್ಣಗೊಂಡ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ತೆಗೆದು, ಯಾವ ವಿಷಯದಲ್ಲಿ ಯಾವ ಪ್ರಶ್ನೆಗೆ ವಿದ್ಯಾರ್ಥಿಗಳಿಗೆ ಉತ್ತರ ಬರೆಯುವುದಕ್ಕೆ ಬಂದಿಲ್ಲ ಎನ್ನುವುದನ್ನು ಪತ್ತೆ ಮಾಡಿ, ಅವರಿಗೆ ವಿಶೇಷ ಮಾರ್ಗದರ್ಶನ ಮಾಡುತ್ತಿದ್ದೇವೆ. 1ನೇ ಪೂರ್ವ ಸಿದ್ಧತಾ ಪರೀಕ್ಷೆಗೆ ಹೋಲಿಕೆ ಮಾಡಿದರೆ 2ನೇ ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಫಲಿತಾಂಶ ಹೆಚ್ಚಾಗಿದೆ.