historical ಹುಬ್ಬಳ್ಳಿಯಲ್ಲಿ ಏರ್ಪಡಿಸಿದ್ದ ಹುಬ್ಬಳ್ಳಿ ರೈಲ್ವೆ ವಿಭಾಗದ 40ನೇ ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿಯ ಸಭೆಯಲ್ಲಿ ಡಿಆರ್ಎಂ ಬೇಲಾ ಮೀನಾ, ಡಾ. ಕಾರ್ತಿಕ ಹೆಗಡೆಕಟ್ಟಿ, ಚಂದ್ರಕಾಂತ ಗವಾಸ್ ಹಾಗೂ ಇತರರು ಪಾಲ್ಗೊಂಡಿದ್ದರು.
ಪ್ರಯಾಣಿಕ ಸ್ನೇಹಿ ಸೌಲಭ್ಯಗಳನ್ನು ಒದಗಿಸುವುದು ಇಲಾಖೆಯ ಪ್ರಮುಖ ಧ್ಯೇಯ
ಸುರಕ್ಷತೆಗೆ ಹೆಚ್ಚಿನ ಆದ್ಯತೆ
ಹುಬ್ಬಳ್ಳಿ:
ನಗರದ ರೈಲ್ವೆ ಕಾರ್ಯಾಗಾರದಲ್ಲಿ ಬುಧವಾರ ಏರ್ಪಡಿಸಿದ್ದ ಹುಬ್ಬಳ್ಳಿ ರೈಲ್ವೆ ವಿಭಾಗದ 40ನೇ ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿಯ (ಡಿಆರ್ಯುುಸಿಸಿ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕ ಸ್ನೇಹಿ ಸೌಲಭ್ಯಗಳನ್ನು ಒದಗಿಸುವುದು ಇಲಾಖೆಯ ಪ್ರಮುಖ ಧ್ಯೇಯವಾಗಿದೆ. ಈ ಯೋಜನೆ ಅಡಿ ಅಳ್ನಾವರ, ಬದಾಮಿ, ಕೊಪ್ಪಳ ಹಾಗೂ ಹೊಸಪೇಟೆ ರೈಲು ನಿಲ್ದಾಣಗಳ ಪುನರಾಭಿವೃದ್ದಿ ಕಾಮಗಾರಿಗಳು ಭರದಿಂದ ಸಾಗುತ್ತಿವೆ ಎಂದು ತಿಳಿಸಿದರು.
ವಾಸ್ಕೋ ಹಾಗೂ ಬಳ್ಳಾರಿ ರೈಲು ನಿಲ್ದಾಣಗಳಲ್ಲಿ ಹಂತ ಹಂತವಾಗಿ ಸುವ್ಯವಸ್ಥಿತ ಮತ್ತು ಆಧುನಿಕ ಮಟ್ಟದ ಉನ್ನತೀಕರಣ ಕಾಮಗಾರಿಗಳನ್ನು ನಡೆಸಲಾಗುತ್ತಿದೆ ಎಂದರು.
ವಿಭಾಗೀಯ ಹಿರಿಯ ವಾಣಿಜ್ಯ ವ್ಯವಸ್ಥಾಪಕರು ಹಾಗೂ ಡಿಆರ್ಯುುಸಿಸಿ ಕಾರ್ಯದರ್ಶಿ ಡಾ. ಕಾರ್ತಿಕ ಹೆಗಡೆಕಟ್ಟಿ ಮಾತನಾಡಿ, ರೈಲು ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ರಾಜ್ಯ ರೈಲ್ವೆ ಪೊಲೀಸ್ ಹಾಗೂ ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದು, ಅಗತ್ಯ ಸ್ಥಳಗಳಲ್ಲಿ ಸಿಸಿಟಿವಿ ಮೂಲಕ ನಿಗಾ ವಹಿಸಲಾಗುತ್ತಿದೆ ಎಂದು ತಿಳಿಸಿದರು.
ಡಿಆರ್ಯುುಸಿಸಿ ಗೋವಾ ಸದಸ್ಯ ಚಂದ್ರಕಾಂತ ಗವಾಸ್ ಮಾತನಾಡಿ, ರೈಲುಗಳಲ್ಲಿ ಟಿಕೆಟ್ ರಹಿತ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿರುವ ಕುರಿತು ಆತಂಕ ವ್ಯಕ್ತಪಡಿಸಿ, ಈ ಬಗ್ಗೆ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಮತ್ತೊಬ್ಬ ಸದಸ್ಯ ವಿ.ಜಿ. ಹಿರೇಗೌಡರ ಹಾಗೂಡಿ.ಆರ್. ರಾಟಿ ಮಾತನಾಡಿದರು.
ಡಿಆರ್ಯುುಸಿಸಿ ಸದಸ್ಯರಾದ ಕಿರಣ ದೀನನಾಥ ನಾಯ್ಕ, ಆರ್. ಗೋಪಾಲ ಕೃಷ್ಣ, ವಿ.ಜಿ. ಹಿರೇಗೌಡರ, ಡಿ.ಆರ್. ರಾಟಿ, ಚನ್ನವೀರ ಮುಂಗುರವಾಡಿ ಹಾಗೂ ಇತರರು ಭಾಗವಹಿಸಿದ್ದರು.