alliance ಇಂಡಿ ಮೈತ್ರಿಕೂಟಕ್ಕೆ ಭಾರಿ ಹೊಡೆತ

alliance ಕೇಂದ್ರ ಸಚಿವ ಪ್ರಲ್ಹಾದ ಜೋಶಿ
alliance ಕೇಂದ್ರ ಸಚಿವ ಪ್ರಲ್ಹಾದ ಜೋಶಿ
Published on

ಪ್ರಮುಖ ಮುಖ್ಯಾಂಶಗಳು

  • ಕಾಂಗ್ರೆಸ್ ಮಿತ್ರಪಕ್ಷಗಳಿಂದ ಹಿಂದೆ ಸರಿದ ಡಿಎಂಕೆ
  • ಕಾಂಗ್ರೆಸ್ ತನ್ನ ಬಹುವರ್ಷಗಳ ಜೊತೆಗಾರ ಡಿಎಂಕೆ ಪಕ್ಷದೊಂದಿಗಿನ ಮೈತ್ರಿ ಮುರಿದುಕೊಂಡಿದೆ.
  • ವಿರೋಧ ಪಕ್ಷದ ಒಗ್ಗಟ್ಟಿನ ಭವಿಷ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ
ಹುಬ್ಬಳ್ಳಿ :alliance
ನಗರದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಟಿವಿಕೆ ಜತೆಗೆ ಕೈ ಜೋಡಿಸುವುದಕ್ಕಾಗಿ ಕಾಂಗ್ರೆಸ್ ತನ್ನ ಬಹುವರ್ಷಗಳ ಜೊತೆಗಾರ ಡಿಎಂಕೆ ಪಕ್ಷದೊಂದಿಗಿನ ಮೈತ್ರಿ ಮುರಿದುಕೊಂಡಿದೆ. ಈ ಹಿನ್ನೆಲೆಯಲ್ಲಿ ಡಿಎಂಕೆ ಸಂಸದೆ ಕನಿಮೋಳಿ ಕರುಣಾನಿಧಿ ಅವರು ತಮ್ಮ ಪಕ್ಷದ ಸದಸ್ಯರಿಗೆ ಹೊಸ ಆಸನ ವ್ಯವಸ್ಥೆ ಕೋರಿ ಲೋಕಸಭಾ ಸ್ಪೀಕರ್ ಅವರಿಗೆ ಪತ್ರ ಬರೆದಿದ್ದಾರೆ ಎಂದರು.
ಕಾಂಗ್ರೆಸ್ ಜತೆಗೆ ತಮಿಳುನಾಡಿನಲ್ಲಿ 55 ವರ್ಷಗಳಿಂದ ಡಿಎಂಕೆ ಜೊತೆ ಮೈತ್ರಿಯಲ್ಲಿದ್ದ ಕಾಂಗ್ರೆಸ್, ಈ ಬಾರಿ ವಿಜಯ್ ಅವರ ಟಿವಿಕೆಗೆ ಬೆಂಬಲ ಘೋಷಿಸಲು ತಮ್ಮ ದಶಕಗಳ ಮೈೖತ್ರಿಯನ್ನು ಮುರಿದುಕೊಂಡಿದ್ದೆ ಇದಕ್ಕೆ ಕಾರಣ ಎಂದರು.
ಡಿಎಂಕೆ ವಿರೋಧ ಪಕ್ಷದ ಪಾಳಯದಲ್ಲಿ ಸ್ವತಂತ್ರ ಬಣವಾಗಿ ಕಾಣಿಸಿಕೊಳ್ಳುತಿದ್ದು, ಈ ಬೆಳವಣಿಗೆಯು ವಿರೋಧ ಪಕ್ಷದ ಒಗ್ಗಟ್ಟಿನ ಭವಿಷ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಹೇಳಿದರು.
ಡಿಎಂಕೆ ಲೋಕಸಭೆಯಲ್ಲಿ 22 ಮತ್ತು ರಾಜ್ಯಸಭೆಯಲ್ಲಿ 8 ಸಂಸದರನ್ನು ಹೊಂದಿದೆ. ಇಂಡಿ ತೊರೆಯುವ ಡಿಎಂಕೆ ನಿರ್ಧಾರವು ಮೈತ್ರಿಕೂಟಕ್ಕೆ ದೊಡ್ಡ ಹೊಡೆತ ನೀಡಲಿದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net