spirit ಸ್ವರ್ಣ ಸಮೂಹ ಸಂಸ್ಥೆಯ ಸಂಸ್ಥಾಪಕ ಡಾ. ವಿ.ಎಸ್.ವಿ. ಪ್ರಸಾದ ಅವರು ಹುಬ್ಬಳ್ಳಿಯ ಮಹಿಳಾ ಪೊಲೀಸ್ ಠಾಣೆಗೆ ಕಂಪ್ಯೂಟರ್ ದೇಣಿಗೆ ನೀಡಿದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಸೇವಾ ಚಟುವಟಿಕೆಗಳು ಇನ್ನಷ್ಟು ವಿಸ್ತರಿಸಬೇಕು.
ಸಮಯೋಚಿತ ಸಹಾಯ, ಸಹಕಾರ ನೀಡಬೇಕು.
ರೋಟರಿ ಸಂಸ್ಥೆಗಳು ಸಮಾಜಕ್ಕೆ ನೀಡುತ್ತಿರುವ ಕೊಡುಗೆ ಶ್ಲಾಘನೀಯ.
ಹುಬ್ಬಳ್ಳಿ :
ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ವತಿಯಿಂದ ಕರ್ನಾಟಕ ಜಿಮಖಾನಾ ಕ್ಲಬ್ನಲ್ಲಿ ಆಯೋಜಿಸಿದ್ದ ನೂತನ ಪದಾಧಿಕಾರಿಗಳ ಪದಗ್ರಹಣದ ಸಮಾರಂಭ ಉದ್ಘಾಟಿಸಿ, ಅವರು ಮಾತನಾಡಿದರು.
ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಂಡಿರುವ ಸಂಘ, ಸಂಸ್ಥೆಗಳು ಹಾಗೂ ಕಾರ್ಯಕರ್ತರಿಗೆ ಸಮಯೋಚಿತ ಸಹಾಯ, ಸಹಕಾರ ನೀಡಬೇಕು ಎಂದು ತಿಳಿಸಿದರು.
ರೋಟರಿ ಸಂಸ್ಥೆಗಳು ಶಿಕ್ಷಣ, ಆರೋಗ್ಯ ಮತ್ತು ಮಾನವೀಯ ಸೇವೆಗಳ ಮೂಲಕ ಸಮಾಜಕ್ಕೆ ನೀಡುತ್ತಿರುವ ಕೊಡುಗೆ ಶ್ಲಾಘನೀಯ. ಇಂತಹ ಸೇವಾ ಚಟುವಟಿಕೆಗಳು ಇನ್ನಷ್ಟು ವಿಸ್ತರಿಸಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಹುಬ್ಬಳ್ಳಿಯ ಮಹಿಳಾ ಪೊಲೀಸ್ ಠಾಣೆಗೆ ಸ್ವರ್ಣ ಸಮೂಹ ಸಂಸ್ಥೆಯ ವತಿಯಿಂದ ಡಾ. ವಿ.ಎಸ್.ವಿ. ಪ್ರಸಾದ ಅವರು ಕಂಪ್ಯೂಟರ್ಗಳನ್ನು ದೇಣಿಗೆ ನೀಡಿದರು.
ವಿದ್ಯಾನಗರದ ರೋಟರಿ ಸರ್ಕಾರಿ ಪೂರ್ವ ಪ್ರಾಥಮಿಕ ಶಾಲೆಯ ಮೂವರು ಶಿಕ್ಷಕರಿಗೆ ಇಡೀ ಒಂದು ವರ್ಷದ ವೇತನ ಹಾಗೂ ಮೂವರು ನರ್ಸಿಂಗ್ ವಿದ್ಯಾರ್ಥಿಗಳ ಕಾಲೇಜು ಶುಲ್ಕದ ಮೊತ್ತದ ಚೆಕ್ಗಳನ್ನು ವಿತರಿಸಿದರು.
ಅಧ್ಯಕ್ಷತೆ ವಹಿಸಿದ್ದ ರೋಟರಿ ಜಿಲ್ಲಾಧ್ಯಕ್ಷ ಡಾ.ಲೆನ್ನಿ ಡೆ ಕೋಸ್ಟಾ ಅವರು ನೂತನ ರೋಟರಿ ಎಲೈಟ್ ಅಧ್ಯಕ್ಷ ಪ್ರಶಾಂತ ಕುರಹಟ್ಟಿ, ಕಾರ್ಯದರ್ಶಿ ಸಂಜಯ ಪೀರಾಪುರ ಸೇರಿದಂತೆ ಎಲ್ಲ ಪದಾಧಿಕಾರಿಗಳಿಗೆ ಪದಗ್ರಹಣ ಬೋಧಿಸಿದರು.
ಐಬಿಎಂಆರ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ವಿನಯಚಂದ್ರ ಮಹೇಂದ್ರಕರ ಹಾಗೂ ಇನ್ನಿತರರನ್ನು ಸನ್ಮಾನಿಸಲಾಯಿತು.