ಬಿಜೆಪಿ ಪಾಲಿಕೆಗೆ ಬಲಿಷ್ಠವಾದ ಸೆಂಟ್ರಲ್ ಕ್ಷೇತ್ರ BJP

 BJP  ಹುಬ್ಬಳ್ಳಿಯ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕಾರಿಣಿ ಸಭೆಯಲ್ಲಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಮಾತನಾಡಿದರು.
BJP ಹುಬ್ಬಳ್ಳಿಯ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕಾರಿಣಿ ಸಭೆಯಲ್ಲಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಮಾತನಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ಕಾರ್ಯಕರ್ತರನ್ನು ಗುರುತಿಸಿ ಸ್ಥಾನಮಾನವನ್ನು ವರಿಷ್ಠರು ನೀಡಲಿದ್ದಾರೆ
  • ಸಂಘಟನೆಯಲ್ಲಿ ತೊಡಗಿಸಿಕೊಂಡವರು ಈ ಕ್ಷೇತ್ರದಿಂದ ಶಾಸಕರಾಗಿದ್ದಾರೆ
  • ಬೂತ್​ಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು
ಹುಬ್ಬಳ್ಳಿ :
ಅರವಿಂದ ನಗರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಸೆಂಟ್ರಲ್ ಕ್ಷೇತ್ರದ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು.
ಮನ್ ಕಿ ಬಾತ್ ವೀಕ್ಷಣೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಹು-ಧಾ ಸೆಂಟ್ರಲ್ ಕ್ಷೇತ್ರ ಪಕ್ಷ ಸಂಘಟನೆಯಲ್ಲಿ ಉತ್ತಮ ಕಾರ್ಯ ಮಾಡಿದೆ ಎಂದರು.
ಮುಂಬರುವ ದಿನಗಳಲ್ಲಿ ಮತದಾರರ ಪರಿಷ್ಕರಣೆ ಎಸ್​ಐಆರ್​ದಲ್ಲಿ ಪ್ರತಿಯೊಬ್ಬರೂ ತಮ್ಮ ಬೂತ್​ಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಮಹಾನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ ಮಾತನಾಡಿ, ಪಕ್ಷದಲ್ಲಿ ಪ್ರತಿಯೊಬ್ಬ ಕಾರ್ಯಕರ್ತರನ್ನು ಗುರುತಿಸಿ ಸ್ಥಾನಮಾನವನ್ನು ವರಿಷ್ಠರು ನೀಡಲಿದ್ದಾರೆ ಎಂದರು.
ರಾಜ್ಯ ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಕೌತಾಳ, ಪಕ್ಷದ ಸಂಘಟನೆ ಕುರಿತು ಮಾತನಾಡಿದರು.
ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಧ್ಯಕ್ಷ ರಾಜು ಕಾಳೆ ಅಧ್ಯಕ್ಷತೆ ವಹಿಸಿದ್ದರು.
ಮಂಡಲ ಪ್ರಧಾನ ಕಾರ್ಯದರ್ಶಿಪ್ರವೀಣ ಪವಾರ, ರಾಮನಗೌಡ ಶೆಟ್ಟನಗೌಡರ, ಪಾಲಿಕೆಯ ಸದಸ್ಯ ರಾಜಣ್ಣ ಕೊರವಿ, ಅಕ್ಕಮ್ಮ ಹೆಗಡೆ, ರೂಪಾ ಶೆಟ್ಟಿ, ಈಶ್ವರಗೌಡ ಪಾಟೀಲ, ಸಿದ್ದು ಮೊಗಲಿಶೆಟ್ಟರ, ರವಿ ನಾಯಕ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net