

ಹುಬ್ಬಳ್ಳಿ: ಪೊಲೀಸ್ ಕಾನ್‌ಸ್ಟೆಬಲ್ ಲಿಖಿತ ಪರೀಕ್ಷೆಯಲ್ಲಾದ
abvp protest
ಲೋಪಗಳಿಂದ ಅಭ್ಯರ್ಥಿಗಳು ಸಮಸ್ಯೆಯ ಸುಳಿಗೆ ಸಿಲುಕಿದ್ದು, ಕೂಡಲೇ ಅವರಿಗೆ ನ್ಯಾಯ ಒದಗಿಸಬೇಕು. ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆದಿರುವ ಅಕ್ರಮಗಳನ್ನು ಉನ್ನತ ಮಟ್ಟದ ತನಿಖಾ ಸಂಸ್ಥೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ನಗರದಲ್ಲಿ ಬುಧವಾರ ನಡೆದ ಪ್ರತಿಭಟನೆಯಲ್ಲಿ, 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆಗೊಳಿಸಿದರು.