(abvp protest) ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ
(abvp protest) ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ರಮಗಳನ್ನು ನಿಗದಿತ ಅವಧಿಯೊಳಗೆ ತನಿಖೆಗೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಎದುರು ಗುರುವಾರ ಪ್ರತಿಭಟನೆ ನಡೆಯಿತು.
ಹುಬ್ಬಳ್ಳಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ನಿಷ್ಪಕ್ಷಪಾತ ಹಾಗೂ ನಿಗದಿತ ಅವಧಿಯಲ್ಲಿ ತನಿಖೆಗೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹು-ಧಾ ನಗರ ವತಿಯಿಂದ (abvp protest) ಇಲ್ಲಿಯ ಬಿವಿಬಿ ಕಾಲೇಜ್ ಎದುರು ಗುರುವಾರ ಪ್ರತಿಭಟನೆ ನಡೆಯಿತು.
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳು ಪಾಲಕರು ಹಾಗೂ ವಿದ್ಯಾರ್ಥಿಗಳಿಗೆ ಆತಂಕ ತರಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮತ್ತು ತನಿಖಾ ಸಂಸ್ಥೆಗಳ ವಿಶ್ವಾಸಾರ್ಹತೆ ಕುಸಿಯುತ್ತಿದೆ. ವಿದ್ಯಾರ್ಥಿಗಳ ಜೀವನದ ಜತೆಗೆ ಚೆಲ್ಲಾಟವಾಗುತ್ತಿದೆ. ಪರೀಕ್ಷೆಗೆ ಮುನ್ನವೇ ಪತ್ರಿಕೆ ಸೋರಿಕೆ ವಿಷಯ ಆಘಾತ ತರಿಸಿದೆ. ಕೂಡಲೇ ಕೇಂದ್ರ ತನಿಖಾ ಸಂಸ್ಥೆಗಳ ಮೂಲಕ ನ್ಯಾಯಸಮ್ಮತ, ನಿಷ್ಪಕ್ಷಪಾತ ಹಾಗೂ ನಿಗದಿತ ಅವಧಿಯೊಳಗೆ ತನಿಖೆ ನಡೆಸಬೇಕು. ಪರೀಕ್ಷಾ ಮಾಫಿಯಾ ಹಿಂದಿನ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿ ತಾಂತ್ರಿಕ ಭದ್ರತೆ, ಗೌಪ್ಯತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾ ನಿರತರು ಆಗ್ರಹಿಸಿದರು.
ಎಬಿವಿಪಿ ರಾಜ್ಯ ಕಾರ್ಯದರ್ಶಿ ದರ್ಶನ ಹೆಗಡೆ ಸುದ್ದಿಗಾರರೊಂದಿಗೆ ಮಾತನಾಡಿ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ವೈಫಲ್ಯವೇ ಈ ಅವಘಡಕ್ಕೆ ಕಾರಣ. ಕೂಡಲೇ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಸಂಚಾಲಕ ಸಿದ್ಧಾರ್ಥ ಕೋರಿ, ಹುಬ್ಬಳ್ಳಿ ತಾಲೂಕು ಸಂಚಾಲಕ ಅನಮೋಲ ಕಲಬುರ್ಗಿ, ಪ್ರಮುಖರಾದ ಮನೋಜ ವಾಲ್ಮೀಕಿ, ಲೋಕೇಶ ಚಿಗರೇರ, ಸುಜನ್ ಗಂಡೋಲಿ, ಲಕ್ಷ್ಮಣ ಗಾನೋಜಿ, ಕರಂ ಗಾಳಿ, ಪೃಥ್ವರಾಜ ಕಾಟಕರ, ರಚಿತ್ ನಾಯಕ್, ಇಷಿಕಾ ಜೈನ್ ಇತರರು ಪ್ರತಿಭಟನೆಯಲ್ಲಿದ್ದರು.