Accident ಹುಬ್ಬಳ್ಳಿಯ ಕಾರ್ಯಕ್ರಮ ಸ್ಥಳದಲ್ಲಿ ಅವಘಡ

Accident ಹುಬ್ಬಳ್ಳಿಯ ಕಾರ್ಯಕ್ರಮ ಸ್ಥಳದಲ್ಲಿ ಕಟೌಟ್ ಬಿದ್ದಿರುವುದು.
Accident ಹುಬ್ಬಳ್ಳಿಯ ಕಾರ್ಯಕ್ರಮ ಸ್ಥಳದಲ್ಲಿ ಕಟೌಟ್ ಬಿದ್ದಿರುವುದು.
Published on

ಪ್ರಮುಖ ಮುಖ್ಯಾಂಶಗಳು

  • ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಕಾರ್ಯಕ್ರಮ ಆಯೋಜನೆ
ಹುಬ್ಬಳ್ಳಿ: accident ಇಲ್ಲಿಯ ಮಂಟೂರ ರಸ್ತೆಯಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಮನೆ ಹಂಚಿಕೆ ಕಾರ್ಯಕ್ರಮದ ಸ್ಥಳದಲ್ಲಿ ಬೃಹತ್ ಕಟೌಟ್ ಮುರಿದು ಬಿದ್ದು ಮೂವರು ಗಾಯಗೊಂಡ ಘಟನೆ ಶನಿವಾರ ಬೆಳಗ್ಗೆ ಸಂಭವಿಸಿದೆ.
ಗಾಯಾಳುಗಳನ್ನು ಮಂಜುನಾಥ, ಶಾಂತಾ ಹಾಗೂ ಶಂಕರ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ.
ಗಾಯಗೊಂಡವರ ಪೈಕಿ ಮಹಿಳೆಯನ್ನು ಕಿಮ್ಸ್ ಹಾಗೂ ಇಬ್ಬರು ಪುರುಷರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ವೇದಿಕೆ ಬಳಿಯಲ್ಲಿಯೇ ಅಂದಾಜು ೩೦ ಅಡಿ ಎತ್ತರದ ಬೃಹತ್ ಕಟೌಟ್ ಬಿದ್ದಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net