ಹುಬ್ಬಳ್ಳಿ: ಬಿಆರ್‌ಟಿಎಸ್ ಹಾಗೂ ಕಾರಿನ ಮಧ್ಯೆ ಡಿಕ್ಕಿ (accident) ಸಂಭವಿಸಿದ್ದು, ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಉಣಕಲ್ ಬಳಿಭಾನುವಾರ ಸಂಭವಿಸಿದೆ.
ಧಾರವಾಡದ ನಿವಾಸಿ ಗಿರೀಶ ಬಣವಿ (58) ಮೃತ ದುರ್ದೈವಿ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದು, ನಗರದ ಕೆಎಂಸಿಆರ್‌ಐನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಉತ್ತರ ಸಂಚಾರ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮಾಹಿತಿ ಕಲೆ ಹಾಕುತ್ತಿದ್ದಾರೆ.