(accident) ರಸ್ತೆ ಅಪಘಾತದಲ್ಲಿ ತಂದೆ, ಮಗು ಸಾವು

ಸಾರಿಗೆ ಬಸ್ ಹಾಗೂ ಬೈಕ್ ಮಧ್ಯೆ ಭೀಕರ (accident) ಅಪಘಾತ
ಸಾರಿಗೆ ಬಸ್ ಹಾಗೂ ಬೈಕ್ ಮಧ್ಯೆ ಭೀಕರ (accident) ಅಪಘಾತ
Published on
ಹುಬ್ಬಳ್ಳಿ: ಸಾರಿಗೆ ಬಸ್ ಹಾಗೂ ಬೈಕ್ ಮಧ್ಯೆ ಭೀಕರ (accident) ಅಪಘಾತವಾಗಿದ್ದು, ತಂದೆ ಹಾಗೂ ಎರಡು ವರ್ಷದ ಮಗು ಮೃತಟ್ಟಿದೆ. ಇನ್ನೊಂದು ಹೆಣ್ಣುಮಗು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿಯ ಕಾರವಾರ ರಸ್ತೆ ಅಂಚಟಗೇರಿ ರಸ್ತೆಯಲ್ಲಿ ಸೋಮವಾರ ಸಂಭವಿಸಿದೆ.
ತಡಸದ ಮೆಹಬೂಬ ಖಾನ್ ಉಸ್ತಾದಿ(36), ಅಸ್ನೇನ್(2) ಮೃತರು. ನಾಲ್ಕು ವರ್ಷದ ಅಜೀಜಾ ಎನ್ನುವ ಹೆಣ್ಣು ಮಗು ಗಾಯಗೊಂಡು ಕೆಎಂಸಿಆರ್‌ಐನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹುಬ್ಬಳ್ಳಿಯಿಂದ ತಡಸಕ್ಕೆ ಹೋಗುವಾಗ ಮೃತ ಮೆಹಬೂಬ ಅವರು ಬೈಕ್ ಓವರ್ ಟೇಕ್ ಮಾಡಲು ಹೋಗಿ ಎದುರಿಗೆ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದ್ದಾರೆ. ತಂದೆ ಹಾಗೂ ಎರಡು ವರ್ಷದ ಮಗು ಮೃತಪಟ್ಟಿದೆ.
ಹುಬ್ಬಳ್ಳೀ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net