ಹುಬ್ಬಳ್ಳಿ: ನವಲಗುಂದ ಶ್ರೀ ರಾಮಲಿಂಗೇಶ್ವರ ಕಾಮಣ್ಣನ ದರ್ಶನ ಪಡೆಯಲು ಬೈಕ್ ಮೇಲೆ ಹೊರಟಿದ್ದ ಯುವಕನೊಬ್ಬ ರಸ್ತೆ ಅಪಘಾತದಲ್ಲಿ (accident) ಮೃತಪಟ್ಟ ಘಟನೆ ತಾಲೂಕಿನ ಕುಸುಗಲ್ ಗ್ರಾಮದ ಬಳಿ ಭಾನುವಾರ ತಡ ರಾತ್ರಿ ಸಂಭವಿಸಿದೆ.
ಹಳೇ ಹುಬ್ಬಳ್ಳಿಯ ಜಂಗ್ಲಿಪೇಟೆ ನಿವಾಸಿ ನಾಗರಾಜ ಯಲ್ಲಪ್ಪ ಯಂಟ್ರಾವಿ(25) ಮೃತರು. ಹಿಂಬದಿ ಸವಾರ ಸಾಗರ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗೆ ದಾಖಲಿಸಲಾಗಿದೆ.
ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೈಲಿಗಲ್ಲುಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.